

ಧಾರವಾಡ: ಕೃಷಿ ಜಮೀನಿನಲ್ಲಿ ಬಿಟ್ಟು ಹೋಗಿದ್ದ ನವಜಾತ ಶಿಶುವಿಗೆ ನಾಯಿ ಕಚ್ಚಿದ್ದು ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಧಾರವಾಡ ನಗರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬೈಹಟ್ಟಿ ಗ್ರಾಮದಲ್ಲಿರುವ ಹೊಲದಲ್ಲಿ ಮಗು ಅಳುತ್ತಿರುವುದನ್ನು ಕೇಳಿದ ಜನರು ಮಗುವನ್ನು ಪತ್ತೆಹಚ್ಚಿದ್ದಾರೆ. ನಾಯಿ ಕಚ್ಚಲು ಪ್ರಾರಂಭಿಸಿದಾಗ ಮಗು ನೋವಿನಿಂದ ಜೋರಾಗಿ ಅಳುತ್ತಿತ್ತು. ಹೊಲದಲ್ಲಿದ್ದ ಜನರು ಸ್ಥಳಕ್ಕೆ ಧಾವಿಸಿ ಆಶಾ ಕಾರ್ಯಕರ್ತರ ಸಹಾಯದಿಂದ ಅದನ್ನು ರಕ್ಷಿಸಿದರು.
ನವಜಾತ ಶಿಶುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅದಕ್ಕೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಮಗುವಿನ ಎಡಗಾಲಿನ ಹೆಬ್ಬೆರಳನ್ನು ಸಂಪೂರ್ಣವಾಗಿ ಅಗಿದು ತಿಂದಿದೆ.
ಸುಮಾರು 2.6 ಕೆಜಿ ತೂಕದ ನವಜಾತ ಶಿಶುವಿಗೆ ಎನ್‌ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡ ಮಗು ಬೆಳಿಗ್ಗೆ ಹೊಲದಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗುಂಜನ್ ಆರ್ಯ ದೃಢಪಡಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮತ್ತು ಮಗುವನ್ನು ತ್ಯಜಿಸಿದ ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Advertisement