

ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ ಸ್ಕೈವಾಕ್ ಬಳಿ ಕಳೆದ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಸ್ಕೈವಾಕ್ ನಲ್ಲಿ ಹಾಕಿದ್ದ ಜಾಹಿರಾತು ಬ್ಯಾನರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.
ಆದರೆ ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಘಟನೆ ಕುರಿತು ಹಲವು ಸುದ್ದಿ ಸಂಸ್ಥೆಗಳು ಮತ್ತು ಸೋಶಿಯಲ್ ಮೀಡಿಯಾ ಪೋಸ್ಟ್ ಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಆದರೆ, ಬ್ಯಾನರ್ ಗೆ ಅಳವಡಿಸಿದ ಲೈಟ್ ಗಳಿಂದ ಶಾರ್ಟ್ ಸರ್ಕಿಟ್ ಆಗಿದ್ದು, ಬೆಂಕಿ ಉಂಟಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement