

ಬೆಂಗಳೂರು: ಕಳೆದ ವಾರ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮುಂಬರುವ ಪರೀಕ್ಷೆಗಳಲ್ಲಿ ಈ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಹೊರಡಿಸಿದೆ.
ಮಾರ್ಗಸೂಚಿಗಳ ಪ್ರಕಾರ, ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬದಲಾಗಿ 11 ರಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗುವ ಸಾಮಾನ್ಯ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿದೆ.
ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಬೆಳಗ್ಗೆ 7ರ ಬದಲು 9.30ಕ್ಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅವುಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಪ್ರಿಂಟ್ ತೆಗೆದುಕೊಂಡು 10.50ಕ್ಕೆ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement