

ಬೆಂಗಳೂರು: ನಡು ರಸ್ತೆಯಲ್ಲಿ ಸ್ಪೋರ್ಟ್ಸ್ ಲ್ಯಾಂಬೋರ್ಗಿನಿ ಕಾರು ರೇಸ್ ಮಾಡಿರುವ ಘಟನೆ ನಗರದ ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ MH 01 EB7434 ಸಂಖ್ಯೆಯ ಲ್ಯಾಂಬೋರ್ಗಿನಿ ಸ್ಪೋರ್ಟ್ಸ್ ಕಾರನ್ನು ಅತೀವೇಗದಲ್ಲಿ ಚಾಲನೆ ಮಾಡಲಾಗಿದ್ದು, ಇದರಿಂದ ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನ ಸವಾರರು ಒಂದು ಕ್ಷಣ ಆತಂಕಗೊಂಡಿದ್ದಾರೆ.
ವೈರಲ್ ಆಗುತ್ತಿರುವ ಈ ವಿಡಿಯೋವನ್ನು ನೋಡಿದ ನೆಟ್ಟಿಗರು, ಇದು ರಸ್ತೆ, ರೇಸ್ ಟ್ರ್ಯಾಕ್ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಇಂತಹ ಅಜಾಗರೂಕ ಚಾಲನೆ ಅಪಾಯಕಾರಿಯಾಗಿದೆ ಎಂದು ಟೀಕೆ ವ್ಯಕ್ತವಾಗುತ್ತಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಗರದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Advertisement