leopard attacked and killed a devotee
ಚಿರತೆ ಪ್ರತ್ಯಕ್ಷ - ಮೃತ ಪ್ರವೀಣ್

ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಭಕ್ತ ಸಾವು; ಪಾದಯಾತ್ರೆ ಸ್ಥಗಿತ!

ಚಿರತೆ ದಾಳಿ ನಡೆಸಿದ ಕೂಡಲೇ ಪ್ರವೀಣ್ ಅವರ ಜೊತೆಗಿದ್ದ ಇತರರು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
Published on

ಚಾಮರಾಜನಗರ: ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಬುಧವಾರ ಬೆಳಗ್ಗೆ ಚಿರತೆಯೊಂದು ದಾಳಿ ದಾಳಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಮಂಡ್ಯ ಜಿಲ್ಲೆಯ ಸುಮಾರು 30 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ತನ್ನ ಗ್ರಾಮದವರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಬಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ ಬುಧವಾರ ಮುಂಜಾನೆ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಕಾಲ್ನಡಿಗೆಯಲ್ಲಿ ತೆರಳುವಾಗ ವಡ್ಡಿನ ಬಳಿ ಇದ್ದಕ್ಕಿದ್ದಂತೆ ಪ್ರವೀಣ್ ಮೇಲೆ ದಾಳಿ ನಡೆಸಿದ ಚಿರತೆ, ಕಾಡಿನೊಳಗೆ ಎಳೆದೊಯ್ದಿದೆ. ಈ ವೇಳೆ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದರಿಂದ, ತೀವ್ರ ರಕ್ತಸ್ರಾವವಾಗಿ ಪ್ರವೀಣ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿರತೆ ದಾಳಿ ನಡೆಸಿದ ಕೂಡಲೇ ಪ್ರವೀಣ್ ಅವರ ಜೊತೆಗಿದ್ದ ಇತರರು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

leopard attacked and killed a devotee
ಮಂಡ್ಯ: ಚಿರತೆ ಮಾರಣಾಂತಿಕ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

ಈ ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತನ ಶವವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

ಪಾದಯಾತ್ರೆ ಸ್ಥಗಿತ

ಚಿರತೆ ದಾಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ದಿನ ಪಾದಯಾತ್ರೆಗೆ ಸ್ಥಗಿತಗೊಳಿಸುವಂತೆ ಅರಣ್ಯಾದಿಕಾರಿಗಳು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com