

ಬೆಂಗಳೂರು: ಎರಡನೇ ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಮುರುಗೇಶ್ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣ ಸಂಬಂಧ ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣುಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಮದುವೆಯಾಗಿತ್ತು. ಆದರೆ ಎರಡನೇ ಮಗಳು ಪ್ರೀತಿಸಿದ ಯುವಕನ ಜೊತೆ ಪರಾರಿಯಾಗಿದ್ದಳು. ಈ ವಿಚಾರ ದಂಪತಿ ನಡುವೆ ಜಗಳಕ್ಕೆ ಕಾರಣವಾಗುತ್ತಿತ್ತು. ಪತಿಯ ಕಿರುಕುಳದಿಂದ ತೀವ್ರವಾಗಿ ನೊಂದಿದ್ದ ಲಕ್ಷ್ಮೀ ಚಾಕುವಿನಿಂದ ಮುರುಗೇಶ್ ಎದೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಮುರುಗೇಶ್ ಮೃತಪಟ್ಟಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ.
Advertisement