ವಿಧಾನಮಂಡಲ ವಿಶೇಷ ಅಧಿವೇಶನ: ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
Congress Legislature Party meeting (File photo)
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಗುರುವಾರ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ನಡುವೆ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ ಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಉಪಸ್ಥಿತರಿರಲಿದ್ದಾರೆ.

ಏತನ್ಮಧ್ಯೆ ಉಭಯ ಸದನಗಳನ್ನು ಉದ್ದೇಶಿಸಿ ಇಂಜು ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಸಾಂಪ್ರದಾಯಿಕವಾಗಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದುವ ಬದಲಾಗಿ ತಾವೇ ಸಿದ್ಧಪಡಿಸಿದ ಭಾಷಣ ಓದಿರುವುದು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಅದೂ ಕೂಡ ಬರೀ ಎರಡು ನಿಮಿಷಗಳ ಭಾಷಣ ಮಾಡಿ ಹೊರನಡೆದಿದ್ದುಾರೆ. ರಾಜ್ಯಪಾಲರ ಈ ನಡೆಯನ್ನು ಕಾಂಗ್ರೆಸ್ ಶಾಸಕರು ಖಂಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

Congress Legislature Party meeting (File photo)
ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆ ಮೌಲ್ಯಗಳ ನೆಲಕ್ಕೆ ಹಾಕಿ ಹೊಸಕುತ್ತಿರುವ BJPಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com