ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ; 38.6 ಕೋಟಿ ರೂ ಮೌಲ್ಯದ ಕೊಕೇನ್ ವಶ!

ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೊಕೇನ್
ಕೊಕೇನ್
Updated on

ಬೆಂಗಳೂರು: ಬ್ರೆಜಿಲ್‌ನ ಸಾವೊ ಪಾಲೊದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತನಿಂದ 38.60 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಆದರೆ ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಕೊಕೇನ್
ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟು ಸಾಗಣೆ; ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಚಿಲಿ ಮೂಲದ ವ್ಯಕ್ತಿ ಬಂಧನ

ಜನವರಿ 21 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಸಾವ್ ಪಾಲೊದಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು 38.60 ಕೋಟಿ ಮೌಲ್ಯದ 7.72 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪ್ರಯಾಣಿಕನನ್ನು NDPS ಕಾಯ್ದೆಯಡಿ ಬಂಧಿಸಲಾಗಿದೆ. ಈ ಕುರಿತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com