

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ.
ಆದೇಶದಂತೆ ಡಿಜಿ ಮತ್ತು ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ ರೂ.20,000ರಂತೆ ಒಟ್ಟು ರೂ. 25 ಲಕ್ಷ, ಡಿಜಿಪಿ, ಎಡಿಜಿಪಿ ಹಾಗೂ ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ ರೂ.8,000ರಂತೆ ಒಟ್ಟು ರೂ.3 ಲಕ್ಷ ಮಂಜೂರಾಗಿದೆ.
ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಲಾ ರೂ.5,000ರಂತೆ ರೂ. 2 ಲಕ್ಷ ನೀಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ ರೂ.5,000ರಂತೆ ಒಟ್ಟು ರೂ.1 ಲಕ್ಷ ಬಹುಮಾನ ನೀಡಲಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳ ಪರಿಣಾಮಕಾರಿ ತನಿಖೆ ಮತ್ತು ವಿಚಾರಣೆಯನ್ನು ಗುರುತಿಸಿ ಈ ಬಹುಮಾನಗಳನ್ನು ನೀಡಲಾಗಿದೆ,
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ವೃತ್ತಿಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಈ ನಗದು ಬಹುಮಾನವನ್ನು ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
Advertisement