

ಬೆಂಗಳೂರು: ರಾಜ್ಯದ ಲೋಕಭವನದಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶ ಬಂದಿದ್ದು, ಇದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರಾಜಭವನದ ಅಧಿಕೃತ ಇ-ಮೇಲ್ ಖಾತೆಗೆ ಬಂದ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿತ್ತು. ಮಧ್ಯಾಹ್ನದೊಳಗೆ ಬಾಂಬ್ ಸ್ಟೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಆರ್‌ಡಿಎಕ್ಸ್ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಗೈನಾ ರಮೇಶ್ ಔಟ್ ಲುಕ್ ಎಂಬ ಇ-ಮೇಲ್ ಖಾತೆಯಿಂದ ಸಂದೇಶ ಬಂದಿತ್ತು ಎನ್ನಲಾಗಿದೆ.
ಇದರಿಂದ ಆತಂಕಗೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕಿçಯ ದಳ ಮತ್ತು ಶ್ವಾನದಳ ತಪಾಸಣೆ ನಡೆಸಿದರು.
ತಪಾಸಣೆ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲದ ಕಾರಣ ಇದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತೀರ್ಮಾನಿಸಲಾಯಿತು. ಈ ಸಂಬಂಧ ಜ.20ರಂದು ಅನಾಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement