ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು; ನಾಲ್ವರಿಗೆ ಗಾಯ

ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.
CM Siddaramaiah's huge cut-out collapses in Hubballi
ಕುಸಿದುಬಿದ್ದ ಬೃಹತ್ ಕಟೌಟ್​ಗಳು
Updated on

ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಒಟ್ಟು 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಇಂದು ಬೆಳಗ್ಗೆ ಈ ಕಟೌಟ್ ಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

CM Siddaramaiah's huge cut-out collapses in Hubballi
'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವು ಕುಸಿದು ಬಿದ್ದಿವೆ. ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com