

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಹಂಚಿಕೊಂಡಿರುವ ವೀಡಿಯೋವೊಂದು ನಗರದಲ್ಲಿ ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟು ಹಾಕಿದೆ.
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲಸದಿಂದ ಮನೆಗೆ ಹಿಂದಿರುಗುವಾಗ ಬೆತ್ತಲೆಯಾಗಿದ್ದ ವ್ಯಕ್ತಿಯೊಬ್ಬ ಕಾರು ಚಲಾಯಿಸಿಕೊಂಡು ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡಿರುವುದಾಗಿ ಹಾಗೂ ನೆರವಿಗಾಗಿ ಕೂಗಿದರೂ ಸ್ಥಳದಲ್ಲಿದ್ದಯಾರೊಬ್ಬರೂ ನೆರವಿಗೆ ಬಾರದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ.
ಮಹಿಳೆಯು ಏದುಸಿರುಬಿಡುತ್ತ ಉಸಿರಾಡುತ್ತಿರುವುದನ್ನು ಮತ್ತು ಸಹಾಯಕ್ಕಾಗಿ ಪದೇ ಪದೆ ಕೂಗಿರುವುದು ಹಾಗೂ ನೆರವಿಗೆ ಧಾವಿಸದ್ದಕ್ಕೆ ಸ್ಥಳೀಯರನ್ನು ಪ್ರಶ್ನಿಸಿರುವುದು ವಿಡಿಯೋ ಕಂಡು ಬಂದಿದೆ.
ಇನ್ನು ಘಟನೆ ಸಂಬಂಧ ಮಹಿಳೆಯು ಪೊಲೀಸರನ್ನು ಸಂಪರ್ಕಿಸಿದ್ದಾರೆಯೇ ಅಥವಾ ದೂರು ದಾಖಲಿಸಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆಯು ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯ ಬಗೆಗಿನ ಕಳವಳವನ್ನು ಹುಟ್ಟು ಹಾಕಿದೆ.
ಅಪರಾಧಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
Advertisement