

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ವಿಚಾರ ಬಹಿರಂಗವಾಗಿ ಗಲಾಟೆಯಾಗಿದ್ದರಿಂದ ವಿವಾಹಿತನೊಬ್ಬ ತಾನೂ ಸಂಬಂಧ ಹೊಂದಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಆಂಧ್ರ ಮೂಲದ ಬಾಬಾಜಾನ್ ಮದುವೆಯಾಗಿ ಇಬ್ಬರು ಮಕ್ಕಳಿದ್ದು ಚಿಂತಾಮಣಿಯಲ್ಲಿ ಪತ್ನಿಯೊಂದಿಗೆ ನೆಲೆಸಿದ್ದನು. ಬಾಬಾಜಾನ್ ಗೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ ನಿವಾಸಿ, ಇಬ್ಬರು ಮಕ್ಕಳ ತಾಯಿ ಸಲ್ಮಾ ಜೊತೆ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರ ತಿಳಿದು ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆಯೂ ನಡೆದಿತ್ತು. ಸಲ್ಮಾಳ ಮನೆಗೆ ಬಂದ ಬಾಬಾಜಾನ್ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಮನೆಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇಳೂರು ಠಾಣೆ ಪೊಲೀಸರು ಘಟನಾ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Advertisement