

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪುರಸ್ಕರಿಸಿದೆ. ಅದರಂತೆ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜುಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ನಾಲ್ವರ ಕುರಿತಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ. ಇನ್ನು ಉಳಿದವರ ವಿರುದ್ಧ ತನಿಖೆ ನಡೆಸಲು ಕೋರ್ಟ್ ಆದೇಶಿಸಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಪ್ರಕರಣ ವಾದ ಪ್ರತಿವಾದ ಆಲಿಸಿದ ಕೋರ್ಟ್ ಅರ್ಜಿಯನ್ನು ವಜಾ ಮಾಡಿ, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Advertisement