

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಗೆ ಬೆಂಕಿ ಹಚ್ಚಿದ 18 ವರ್ಷದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿನ ಜಾತ್ರೆಗೆಂದು ದಿನಕರ್ ಕುಟುಂಬ ಸಮೇತರಾಗಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಫೈಸಾನ್ ಜಾಫರ್ ಶೇಖ್ ಎಂಬ ಯುವಕ ವೈಯಕ್ತಿಕ ದ್ವೇಷದಿಂದ ದಿನಕರ್ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಬೆಂಕಿ ಹಚ್ಚಿದ ತಕ್ಷಣವೇ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿಯನ್ನು ಹಿಡಿದುಕೊಳ್ಳಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.
ಘಟನೆಯಿಂದ ದೇವರ ಹಕ್ಕಲ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಘಟನೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಇನ್ನೂ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement