

ರಾಯಚೂರು: ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ನಿನ್ನೆಯಷ್ಟೆ ಹಣ ಕೊಡದಿದ್ದಕ್ಕೆ ಮಗನೇ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದನು. ಇದರ ಬೆನ್ನಲ್ಲೇ ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿದ್ದಾನೆ. ಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆಯಲಾಗಿದೆ.
Advertisement