ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿ.ಕೆ ಶಿವಕುಮಾರ್; Video

ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.
DK Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿಮಾಡಿದ್ದೇ" ಎಂದರು.

"ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು" ಎಂದರು.

ಇತ್ತೀಚೆಗೆ ಹೆಚ್ಚು ವಿಮಾನ ಅಪಘಾತಗಳು ಆಗುತ್ತಿರುವ ಬಗ್ಗೆ ಹಾಗೂ ತಾಂತ್ರಿಕ ದೋಷ ಎಂದು ಹೇಳುತ್ತಿದ್ದಾರೆ ಎಂದಾಗ, "ಇದರ ಬಗ್ಗೆ ವಿಸ್ತೃತ ವರದಿ ಬಂದ ನಂತರ ಮಾತನಾಡುತ್ತೇನೆ. ತಾಂತ್ರಿಕ ದೋಷದ ಬಗ್ಗೆ ನನಗೆ ಏನು ಗೊತ್ತು. ಮುಂಬೈನ ಗೆಳೆಯರು ಸೇರಿದಂತೆ ಹಲವರು ವಿಷಯ ತಿಳಿಸಿದ್ದಾರೆ" ಎಂದರು‌.

ತಿಮ್ಮಾಪುರ ರಾಜಿನಾಮೆಗೆ ಒತ್ತಾಯ; ವಿಪಕ್ಷಗಳ ಉತ್ಪ್ರೇಕ್ಷೆ

ಆರ್.ಬಿ.ತಿಮ್ಮಾಪುರ ಅವರ ರಾಜಿನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಕೇಳಿದಾಗ, "ನನ್ನ ಪ್ರಕಾರ ಆರ್.ಬಿ. ತಿಮ್ಮಾಪುರ ಅವರಿಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎನಿಸುತ್ತದೆ. ವಿಪಕ್ಷಗಳು ಬೇಕಂತಲೇ ಉತ್ಪ್ರೇಕ್ಷೆ ಮಾಡುತ್ತಿವೆ. ಇದರ ಬಗ್ಗೆ ಮುಖ್ಯಮಂತ್ರಿಯವರ ಬಳಿ ವಿವರವಾಗಿ ಮಾತನಾಡಿ ಆನಂತರ ತಿಳಿಸುತ್ತೇನೆ. ರಾಜಕೀಯ ಷಡ್ಯಂತ್ರ ನಡೆಯುತ್ತಿದೆ" ಎಂದರು.

DK Shivakumar
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ ಹೇಗಾಯಿತು? ಕೊನೆ ಕ್ಷಣದ ವಿಡಿಯೊ ಏನು ಹೇಳುತ್ತದೆ? Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com