

ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಆತನಿಗೆ 4 ಲಕ್ಷ ರೂಪಾಯಿ ಲಂಚ ನೀಡುವಂತೆ ಗೋವಿಂದರಾಜು ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಗೋವಿಂದರಾಜುನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
Advertisement