ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಜನ್ಮದಿನ, ವಾರ್ಷಿಕೋತ್ಸವಕ್ಕೂ ರಜೆ ಘೋಷಣೆ

ಪೊಲೀಸರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ.
Good News For Karnataka Police
ಕರ್ನಾಟಕ ಪೊಲೀಸ್ ಇಲಾಖೆ
Updated on

ಬೆಂಗಳೂರು: ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ.

ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ. ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

Good News For Karnataka Police
ಬೆಂಗಳೂರು: ಥೈಲ್ಯಾಂಡ್ ನಿಂದ ಮಾದಕ ವಸ್ತು ಸಾಗಣೆ ಜಾಲ ಪತ್ತೆ; 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ, 10 ಮಂದಿ ಬಂಧನ

ಆದೇಶದಲ್ಲೇನಿದೆ?

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ.

ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.

ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com