

ಮಡಿಕೇರಿ: ಕೊಡಗಿನ ಕಾಲೇಜು ವಿದ್ಯಾರ್ಥಿನಿಯರ ಜೊತೆಗಿನ ರಾಸಲೀಲೆಯನ್ನು ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ 21 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬಂಧಿತ ಆರೋಪಿ, ಬೆಂಗಳೂರಿನ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ನಿವಾಸಿ ಮೊಹಮ್ಮದ್ ಸವಾದ್ ಎಂದು ಗುರುತಿಸಲಾಗಿದೆ.
ಜನವರಿ 21 ರಂದು ನಾಪೋಕ್ಲು ನಿವಾಸಿಯೊಬ್ಬರಿಂದ, ಕೊಡಗು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಎಸ್. ಪ್ರಸನ್ನ ಭಟ್ ಅವರ ವಾಟ್ಸಾಪ್ ಸಂಖ್ಯೆಗೆ ಆಪಾದಿತ ವಿಡಿಯೋ ತುಣುಕುಗಳನ್ನು ಸ್ವೀಕರಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯುವಕ ಮತ್ತು ಇಬ್ಬರು ಮಹಿಳೆಯರನ್ನು ಒಳಗೊಂಡ ಅಶ್ಲೀಲ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರಸನ್ನ ಭಟ್ ಅವರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿ ಮೊಹಮ್ಮದ್ ಸವದ್‌ನನ್ನು ಬಂಧಿಸಿದ್ದಾರೆ.
ದೂರುದಾರರು ಆರೋಪಿಸಿರುವ ಪ್ರಕಾರ, ಆರೋಪಿ ಯುವಕ ವಿಭಿನ್ನ ಸಂದರ್ಭಗಳಲ್ಲಿ ಇಬ್ಬರು ವಿಭಿನ್ನ ಯುವತಿರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ವಿಡಿಯೋ ಕ್ಲಿಪ್ ನಲ್ಲಿದೆ.
ಆರೋಪಿ ಮೊಹಮ್ಮದ್ ಬೆಂಗಳೂರಿನಲ್ಲಿದ್ದರೂ ಕೊಡಗಿನ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಕಾರಣ, ಅವರೊಂದಿಗೆ ಸ್ನೇಹ ಬೆಳಸಿ, ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಎನ್ನಲಾಗಿದೆ.
ಸವದ್‌ನ ಮೊಬೈಲ್ ಅಕಸ್ಮಾತಾಗಿ ಆತನ ಗೆಳೆಯರಿಗೆ ಸಿಕ್ಕಿದೆ. ಅವರು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಮಾಡಿದ್ದಾರೆ ಎನ್ನಲಾಗಿದೆ.
Advertisement