DK shivkumar
ಡಿ.ಕೆ. ಶಿವಕುಮಾರ್

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ BJP ಸಂಸದರು; ಹಗರಣಗಳನ್ನು ಬಯಲು ಮಾಡೋಣ: ಡಿ.ಕೆ ಶಿವಕುಮಾರ್

ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದು ತಿವಿದರು.
Published on

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದರು.

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದು ತಿವಿದರು.

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ.

ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು.

DK shivkumar
VB-G RAM G ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ; ಆಡಳಿತದಲ್ಲಿ ಯತೀಂದ್ರ ಹಸ್ತಕ್ಷೇಪ ನೋಡಿಲ್ಲ: ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ.

ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ.

ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ” ಎಂದರು.

ಮಂಗನ ಖಾಯಿಲೆಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com