

ಬೆಂಗಳೂರು: ಸಹಸ್ರಾರು ಕೋಟಿ ರೂ. ಒಡೆಯ ಆಗಿದ್ರೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಅವರ ಡೈರಿನಲ್ಲಿ ಅನೇಕ ಮಾಹಿತಿಗಳು ಹೊರಬಂದಿದೆ.
ಇನ್ನೂ ಡೈರಿ ಬರೆಯುವ ಹವ್ಯಾಸ ಇಟ್ಟುಕೊಂಡಿದ್ದ ಸಿಜೆ ರಾಯ್ ಅವರ ಡೈರಿಯಲ್ಲಿ ಪ್ರಭಾವಿ ರಾಜಕಾರಣಿಗಳು, ಶಾಸಕರ ಹೆಸರು ಗಳ ಉಲ್ಲೇಖವಿದೆ. ಬೆಂಗಳೂರು ಹಾಗೂ ಕೋಲಾರ ಜಿಲ್ಲೆಯ ಶಾಸಕರು ಒಬ್ಬರು ಸಂಸದರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿರುವುದು ತಿಳಿದುಬಂದಿದೆ. ಚಿತ್ರರಂಗದ ಅನೇಕ ನಟಿಯರು, ಮಾಡೆಲ್ ಗಳ ಹೆಸರನ್ನು ಸಹ ಡೈರಿಯಲ್ಲಿ ಅವರು ಉಲ್ಲೇಖಿಸಿದ್ದಾರೆ.
ಈ ಮಧ್ಯೆ ಸಿಜೆ ರಾಯ್ ಸಾವಿನ ಬೆನ್ನಲ್ಲೇ 'ಬಿಗ್ ಬಾಸ್' ಮಾಜಿ ಸ್ಪರ್ಧಿ ಭುವನ್ ಪೊನ್ನಣ್ಣ ಮಾಡಿರುವ ಪೋಸ್ಟ್ ವೈರಲ್ ಆಗಿದೆ.
ನಾವು ಪ್ರೀತಿಯಿಂದ ಕರೆಯುತ್ತಿದ್ದ ಡಾ. ರಾಯ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು ಮತ್ತು ಆಘಾತವಾಯಿತು. ಅವರು ಯಾವಾಗಲೂ ಜೀವನ ಮತ್ತು ಮಹತ್ವಾಕಾಂಕ್ಷೆಗಳಿಂದ ತುಂಬಿದ್ದರು ಎಂದಿದ್ದಾರೆ.
ಹಣ ಮತ್ತು ಇತರ ಭೌತಿಕ ಲಾಭಗಳ ವಿಷಯಕ್ಕೆ ಬಂದಾಗ ಮಾನವೀಯತೆ ಸತ್ತಿದೆ ಎಂದು ನನಗೆ ಕೆಲವೊಮ್ಮೆ ಅನಿಸುತ್ತದೆ. ಕಾರಣ ಯಾರೇ ಆಗಿರಲಿ ಅವರು ಕರ್ಮವನ್ನು ಎದುರಿಸಬೇಕಾಗುತ್ತದೆ. ಓಂ ಶಾಂತಿ ಡಾ. ರಾಯ್. ಎಲ್ಲದಕ್ಕೂ ಧನ್ಯವಾದಗಳು. ನಿಮ್ಮನ್ನು ಎಂದಿಗೂ ಸ್ಮರಿಸುತ್ತೇವೆ ಎಂದು ಬರೆದಿದ್ದಾರೆ. ಅದರೊಂದಿಗೆ ಗುಲಾಬಿ ಹಾಗೂ ಕೈ ಮುಗಿಯುವ ಸಿಂಬಲ್ ಹಾಕಿದ್ದಾರೆ.
Advertisement