

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿದರು. ಶೂಟೌಟ್ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ
ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆ ಯಾರಾದರೂ ಶೂಟ್ ಮಾಡಿದ್ರಾ ಎಂಬುದರ ಬಗ್ಗೆ ಅನುಮಾನವಿದೆ ಎಂದರು.
ಕೇರಳ ಚುನಾವಣೆಗೆ ಬಿಜೆಪಿಯವರು ಸಿಜೆ ರಾಯ್ ಅವರಿಂದ ನೂರಾರು ಕೋಟಿ ರೂ. ದುಡ್ಡು ಕೇಳಿದ್ರು, ಈ ವಿಚಾರವಾಗಿ ಟಾರ್ಗೆಟ್ ಮಾಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆಗೆ ಒಳಪಡಿಸಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.
ಸಿಬಿಐ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಅದು ಬಿಜೆಪಿ ಕೈಯಲಿದೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು.
Advertisement