ತುಮಕೂರು: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್!

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ನಾಗೇಶ್ ಎಸ್‌ಕೆ ಎಂಬುವವರಿಂದ ಪಿಎಸ್ಐ ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ನಂತರ, ಒಂದು ಲಕ್ಷ ರೂಪಾಯಿಗೆ ಲಂಚವನ್ನು ಇಳಿಸಲಾಗಿತ್ತು.
representational image
ಸಾಂದರ್ಭಿಕ ಚಿತ್ರ
Updated on

ತುಮಕೂರು: ತುಮಕೂರಿನಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ವಶಪಡಿಸಿಕೊಂಡಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚೇತನ್ ಕುಮಾರ್ ಎಸ್ ಅವರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಕಾರನ್ನು ಬಿಡುಗಡೆ ಮಾಡಲು ನಾಗೇಶ್ ಎಸ್‌ಕೆ ಎಂಬುವವರಿಂದ ಪಿಎಸ್ಐ ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ನಂತರ, ಒಂದು ಲಕ್ಷ ರೂಪಾಯಿಗೆ ಲಂಚವನ್ನು ಇಳಿಸಲಾಗಿತ್ತು.

ಈ ಪೈಕಿ ಶುಕ್ರವಾರ ರಾತ್ರಿ, ಚೇತನ್ ಮುಂಗಡವಾಗಿ ₹40,000 ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

representational image
ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ; ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video

ಬೆಂಗಳೂರಿನಲ್ಲಿ ಕೆಪಿ ಅಗ್ರಹಾರ ಪೊಲೀಸ್ ಇನ್ಸ್‌ಪೆಕ್ಟರ್ ಗೋವಿಂದರಾಜು ₹4 ಲಕ್ಷ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗೋವಿಂದರಾಜು ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಎಂಡಿ ಅಕ್ಬರ್ (42) ನೀಡಿದ ದೂರಿನ ಮೇರೆಗೆ ಇನ್ಸ್‌ಪೆಕ್ಟರ್ ಸಿಕ್ಕಿಬಿದ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com