ಬೆಂಗಳೂರು: ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ; ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.
Representative Image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬಾಡಿಗೆ ಮನೆಯಲ್ಲಿ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತರನ್ನು ಜಯಂತ್ ಶಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ್ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು.

ಒಲೆಯ ಮೇಲೆ ಅಕ್ಕಿ ಬೇಯಿಸುತ್ತಿದ್ದಾಗ, ಮನೆಯಲ್ಲಿ ಇಂಗಾಲದ ಮಾನಾಕ್ಸೈಡ್ ಸಂಗ್ರಹವಾಗಿ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಯಲ್ಲಿ ಗಾಳಿ ವ್ಯವಸ್ಥೆ ಇರಲಿಲ್ಲ ಮತ್ತು ಇದ್ದ ಒಂದೇ ಒಂದು ಕಿಟಕಿಯನ್ನು ಸಹ ಮುಚ್ಚಲಾಗಿತ್ತು ಎಂದು ವರದಿಯಾಗಿದೆ.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತರು ಹತ್ತಿರದ ಗೋದಾಮಿನಲ್ಲಿ ವಸ್ತುಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಕೆಲಸ ಮಾಡುತ್ತಿದ್ದರು.

ಶೀತ ವಾತಾವರಣದಿಂದಾಗಿ, ಅವರು ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿದ್ದರು. ಇದರಿಂದಾಗಿ ಮನೆಯಲ್ಲಿ ಗಾಳಿಯಾಡದಂತಾಗಿತ್ತು.

Representative Image
ಬೀದರ್ ನಲ್ಲಿ ನಿಗೂಢ ಸ್ಫೋಟ; 4 ಮಕ್ಕಳು ಸೇರಿ 6 ಮಂದಿಗೆ ಗಾಯ, 6 ತಿಂಗಳಲ್ಲಿ ಎರಡನೇ ಬ್ಲಾಸ್ಟ್! Video

'ಪ್ರಾಥಮಿಕ ತನಿಖೆ ಪ್ರಕಾರ, ಅಡುಗೆ ಮಾಡಿದ್ದರಿಂದ ಇಂಗಾಲದ ಮಾನಾಕ್ಸೈಡ್ ಸಂಗ್ರಹವಾಗಿದೆ. ಸರಿಯಾದ ಗಾಳಿಯಾಡದಿರುವುದರಿಂದ ಕಾರ್ಮಿಕರು ಪ್ರಜ್ಞೆ ಕಳೆದುಕೊಂಡಿದ್ದಾರೆ. ನಂತರ, ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ' ಎಂದು ಅಧಿಕಾರಿ ಹೇಳಿದರು.

ಸ್ನೇಹಿತರೊಬ್ಬರು ಮನೆಗೆ ಭೇಟಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಬಾಗಿಲಲ್ಲಿ ನಿಂತು ಕೂಗಿದಾಗ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಅವರು ಹೊರಗಿನಿಂದ ಕಿಟಕಿ ತೆರೆಯಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಳ ನಂತರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು. ಸಾವಿನ ನಿಖರವಾದ ಕಾರಣವನ್ನು ದೃಢೀಕರಿಸಲು ಅಧಿಕಾರಿಗಳು ಶವಪರೀಕ್ಷೆ ವರದಿ ಮತ್ತು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com