

ಬೆಂಗಳೂರು: ತುಂಗಭದ್ರಾ ಜಲಾಶಯಕ್ಕೆ 33 ಹೊಸ ಗೇಟ್‌ಗಳನ್ನು ಅಳವಡಿಸುವ ಸಂಬಂಧ ಕರ್ನಾಟಕ ಸರ್ಕಾರ ತನ್ನ ಪಾಲಿನ ಹಣವನ್ನು ಹಿಂಪಡೆದಿದೆ ಎಂದು ಹೇಳಲಾಗುತ್ತಿದ್ದು. ಇದರ ಬೆನ್ನಲ್ಲೇ ರಾಜ್ಯದ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು. ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತುಂಗಭದ್ರಾ ಮಂಡಳಿ ಮೇ 2026ರೊಳಗೆ ಎಲ್ಲಾ ಹೊಸ ಗೇಟ್‌ಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಹಿತವನ್ನು ಕಾಪಾಡಬೇಕಾದರೆ ಕರ್ನಾಟಕ ಸರ್ಕಾರ ತಡೆಹಿಡಿದಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಿ ತನ್ನ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕಳೆದ ವರ್ಷ ತುಂಗಭದ್ರಾ ಜಲಾಶಯದ 19ನೇ ಗೇಟ್ ಮುರಿದ ಘಟನೆ ಎಲ್ಲರಿಗೂ ತಿಳಿದಿದೆ. ಆಗ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಗೇಟ್ ಅಳವಡಿಸಿತ್ತು. ತಜ್ಞರ ಸಲಹೆ ಮೇರೆಗೆ ಮುರಿದ ಗೇಟ್ ಸೇರಿದಂತೆ ಉಳಿದ 33 ಗೇಟ್‌ಗಳನ್ನು ಬದಲಾಯಿಸಲು ತುಂಗಗಭದ್ರಾ ಮಂಡಳಿ ಕ್ರಮ ಕೈಗೊಂಡಿದೆ.
ಈ ಗೇಟ್‌ಗಳ ಬದಲಾವಣೆ ವೆಚ್ಚವನ್ನು ಕರ್ನಾಟಕ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ಭರಿಸಬೇಕಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ರೂ.10 ಕೋಟಿ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ ಸರ್ಕಾರ ರೂ.20 ಕೋಟಿ ಬಿಡುಗಡೆ ಮಾಡಿದೆ,
ಇದರಲ್ಲಿ ಆಂಧ್ರಪ್ರದೇಶ ಸರ್ಕಾರ ಬಿಡುಗಡೆ ಮಾಡುವ ಮೊತ್ತವು ಕರ್ನಾಟಕ ಸರ್ಕಾರದ ಹೊಸಪೇಟೆ ಖಜಾನೆಯ ಮೂಲಕನೇ ಬಿಡುಗಡೆ ಮಾಡಲಾಗುತ್ತದೆ. ನಂತರ ಆಂಧ್ರ ಸರ್ಕಾರವು ತುಂಗಭದ್ರಾ ಮಂಡಳಿಗೆ ನಿರ್ವಹಣೆ ಮತ್ತು ವೇತನಕ್ಕಾಗಿಕರ್ನಾಟಕ ಸರ್ಕಾರದ ಹೊಸಪೇಟೆ ಖಜಾನೆಹೆ 33 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಮೊತ್ತವನ್ನು ತುಂಗಾಭದ್ರಾ ಮಂಡಳಿಗೆ ಪಾವತಿಸಬೇಕಾಗಿದೆ ಎಂದು ವಿವರಿಸಿದರು
Advertisement