ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.
ಉಪನ್ಯಾಸಕನ ಬಂಧನ
ಉಪನ್ಯಾಸಕನ ಬಂಧನ
Updated on

ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್‌ ಎಂಬಾತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ರವಿಕಿರಣ್ ಗೆ ಮೊದಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆಗೆ ರವಿಕಿರಣ್ ಗೆ ಪರಿಚಯ ಬೆಳೆದಿತ್ತು. ಬಳಿಕ ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿ ಜೊತೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಉಪನ್ಯಾಸಕನ ಬಂಧನ
ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!

ಇನ್ನು ರವಿಕಿರಣ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ವಿಚಾರ ತಿಳಿದು ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೆ ಪೋಷಕರು ಜೊತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರು ಆಧರಿಸಿ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com