ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ 'ಇ-ಸ್ವತ್ತು: ಮುಂದಿನ ತಿಂಗಳಿಂದ 'ಮನೆ ಮನೆಗೆ ಅಭಿಯಾನ ಆರಂಭ!

ಹಳ್ಳಿಗಳಲ್ಲಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ನೇರವಾಗಿ 'ಮನೆ ಮನೆಗೆ ಇ-ಸ್ವತ್ತು' ನೀಡುವ ವಿಶೇಷ ಅಭಿಯಾನವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
Eshwar khandre
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆonline desk
Updated on

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ 'ಇ-ಸ್ವತ್ತು' (E-Swathu) ಪ್ರಮಾಣಪತ್ರ ನೀಡಿಕೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಹಳ್ಳಿಗಳಲ್ಲಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ನೇರವಾಗಿ 'ಮನೆ ಮನೆಗೆ ಇ-ಸ್ವತ್ತು' ನೀಡುವ ವಿಶೇಷ ಅಭಿಯಾನವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಪ್ರಸ್ತುತ ಇ-ಸ್ವತ್ತು ವಿತರಣೆ ವ್ಯವಸ್ಥೆಯಲ್ಲಿ ಕೆಲವು ತಾಂತ್ರಿಕ ಅಡಚಣೆಗಳಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಸಾಫ್ಟ್‌ವೇರ್ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಗರಿಷ್ಠ ಒಂದು ತಿಂಗಳ ಒಳಗಾಗಿ ಸಂಪೂರ್ಣವಾಗಿ ಬಗೆಹರಿಸಬೇಕು ಎಂದು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Eshwar khandre
ಇ-ಸ್ವತ್ತು 2.0 ತಂತ್ರಾಂಶಕ್ಕೆ ಸರ್ಕಾರ ಚಾಲನೆ: 2,000 ಕೋಟಿ ರೂ ಆದಾಯ ಹೆಚ್ಚಳದ ನಿರೀಕ್ಷೆ

ತಂತ್ರಾಂಶದ (Software) ಎಲ್ಲಾ ಸಮಸ್ಯೆಗಳು ನಿವಾರಣೆಯಾದ ತಕ್ಷಣ, ಅಂದರೆ ಮುಂದಿನ ತಿಂಗಳಿಂದಲೇ ಗ್ರಾಮೀಣ ಭಾಗದ ಪ್ರತಿ ಮನೆಗೆ ಖುದ್ದಾಗಿ ಇ-ಸ್ವತ್ತು ತಲುಪಿಸುವ ಬೃಹತ್ ಯೋಜನೆಯನ್ನು ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ.

ಈ ಮಹತ್ವಾಕಾಂಕ್ಷಿ ಕ್ರಮದಿಂದಾಗಿ ಗ್ರಾಮೀಣ ಭಾಗದ ಜನರಿಗೆ ಯಾವುದೇ ವಿಳಂಬವಿಲ್ಲದೆ, ಪಾರದರ್ಶಕವಾಗಿ ತಮ್ಮ ಆಸ್ತಿ ದಾಖಲಾತಿಗಳು ಕೈಸೇರಲಿವೆ ಎಂದು ಸಚಿವರು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com