ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ.
KSRTC bus
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು online desk
Updated on

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿದೆ. ಸರ್ಕಾರ 4 ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, ಈ ತಿಂಗಳಿನಿಂದಲೇ ಸಾರಿಗೆ ನೌಕರರ ಖಾತೆಗೆ ಪರಿಷ್ಕೃತ ವೇತನ ಜಮೆಯಾಗಲಿದೆ.

KSRTC bus
ಸಾರಿಗೆ ನಿಗಮಗಳಿಗೆ 5 ಸಾವಿರ ಹೊಸ ಬಸ್‌ ಸೇರ್ಪಡೆ: ಬೈರತಿ ಸುರೇಶ್

ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ.ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದ್ದು, ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ. ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆದೇಶ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com