ದರ್ಶನ್‌ಗೆ ಹೊಸ ಟೆನ್ಷನ್: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ- ಮೂವರ ಬಂಧನ

ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.
Darshan and renukaswamy
ದರ್ಶನ್ ಮತ್ತು ರೇಣುಕಾಸ್ವಾಮಿ
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್‌ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್ ಎಂಬ ವಿಷಯ ಬೆಳಕಿಗೆ ಬಂದಿದೆ.

ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

ಎಂ.ಆರ್‌ ಪುನೀತ್‌‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದಾನೆ. ರೇಣುಕಾಸ್ವಾಮಿ ಶವ ಬಿಸಾಡಲು ಮತ್ತೊಬ್ಬ ಸಾಕ್ಷಿ ಸಂದೀಪ್‌ಗೆ ಸ್ಕಾರ್ಪಿಯೋ ಕಾರು ಕೊಟ್ಟಿದ್ದೇ ಈ ಪುನೀತ್‌. ಶವ ಬಿಸಾಡಿದ ಬಳಿಕ ಕಾರನ್ನ ತೊಳೆಸಿದ್ದ. ಆ ಕಾರನ್ನ ದರ್ಶನ್‌ಗೆ ನೀಡಿದ್ದಾಗಿ, ಬಳಿಕ ರಕ್ತದ ಕಲೆ ತೊಳಿಸಿದ್ದಾಗಿಯೂ ಹೇಳಿಕೆ ನೀಡಿದ್ದ.

Darshan and renukaswamy
ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ಈಗಾಗಲೇ ಕಷ್ಟದ ಸಮಯದಲ್ಲಿದ್ದೇವೆ- ಮತ್ತಷ್ಟು ಆತಂಕ ಹೆಚ್ಚಿಸಬೇಡಿ; ವಿಜಯಲಕ್ಷ್ಮಿ

ಹಾಗಾಗಿ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕರೆತಂದಿಲ್ಲ ಎಂದು ಹೇಳುವಂತೆ ಪುನೀತ್‌, ಸಂದೀಪ್‌ಗೆ ಒತ್ತಡ ಹೇರಿದ್ದ. ಈ ಬಗ್ಗೆ ಕೋರ್ಟ್‌ಗೆ ಸಂದೀಪ್‌ ಪ್ರಮಾಣ ಪತ್ರ ಸಲ್ಲಿಸಿದ್ದ. ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.

ಜೂನ್ 8, 2024 ರಂದು ಆರ್.ಆರ್. ನಗರದ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಎರಡನೇ ಆರೋಪಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೊದಲ ಆರೋಪಿ ಪವಿತ್ರಾ ಗೌಡ ಕೂಡ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com