ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಕಾರ್ಮಿಕರ ಸಾವಿಗೆ ನ್ಯಾಯ ಬೇಕು; ಪರಿಹಾರ, ತನಿಖೆಗೆ ಪ್ರತಿಪಕ್ಷಗಳ ಆಗ್ರಹ

ಕಾರ್ಮಿಕರ ಜೀವ ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ದುರ್ಘಟನೆ ಸರ್ಕಾರದ ವೈಫಲ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಮೃತರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
BJP
ಬಿಜೆಪಿonline desk
Updated on

ಬೆಂಗಳೂರು: ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನದಲ್ಲಿನ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

"ಕಾರ್ಮಿಕರ ಜೀವ ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ದುರ್ಘಟನೆ ಸರ್ಕಾರದ ವೈಫಲ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಮೃತರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಮೃತರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕು ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 'ಎಕ್ಸ್' ಖಾತೆಯಲ್ಲಿ ಪ್ರತಿಕ್ರಿಯಿಸಿ, ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇಂತಹ ದುರ್ಘಟನೆಗಳು ಮರುಕಳಿಸದಂತೆ ಕ್ವಾರಿ ಹಾಗೂ ಕ್ರಷರ್ ಕೈಗಾರಿಕೆಗಳಲ್ಲಿ ಕಡ್ಡಾಯ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

BJP
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 8 ಕಾರ್ಮಿಕರ ಸಾವು ಅಪರಾಧ ಕೃತ್ಯ: ಶಾಸಕ S T ಸೋಮಶೇಖರ್

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. "ರಾಜ್ಯದ ವಿವಿಧ ಭಾಗಗಳಲ್ಲಿ ಕ್ವಾರಿ ದುರಂತಗಳು ಪದೇ ಪದೇ ಸಂಭವಿಸುತ್ತಿದ್ದರೂ, ಯಾರನ್ನೂ ಹೊಣೆಗಾರರನ್ನಾಗಿ ಮಾಡದಿರುವುದು ವಿಷಾದನೀಯ.

ಕ್ವಾರಿ ಮಾಲೀಕರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com