ಸರ್ಕಾರದ ನಿರ್ಲಕ್ಷ್ಯದಿಂದ ಕಲ್ಲುಗಣಿ ಕ್ವಾರಿಯಲ್ಲಿ ದುರಂತ ಸಂಭವಿಸಿದೆ: R ಅಶೋಕ್

ರಾಜಕಾರಣಿಗಳ ಹೆಸರು ಹೇಳಿಕೊಂಡು ಲೈಸೆನ್ಸ್‌ ಇಲ್ಲದೆಯೇ ಅನಧಿಕೃತವಾಗಿ ಕ್ವಾರಿ ಗಣಿ ನಡೆಯುತ್ತಿದೆ. ಬೆಂಗಳೂರಿಗೆ 15 ಕಿ.ಮೀ. ದೂರದ ಕ್ವಾರಿಯಲ್ಲಿ ಪರಿಶೀಲನೆ ಮಾಡುವ ಯೋಗ್ಯತೆ ಇಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಜಕ್ಕೂ ಸತ್ತುಹೋಗಿದೆ ಎಂದು ಆರ್ ಅಶೋಕ್ ಕಿಡಿಕಾರಿದರು.
R Ashok
ಆರ್ ಅಶೋಕ್
Updated on

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಗುರುತು ಸಿಗಲಾರದ ಮಟ್ಟಿಗೆ ದೇಹಗಳು ಛಿದ್ರಗೊಂಡಿವೆ. ನಾನು ವೈದ್ಯರನ್ನು ಭೇಟಿ ಮಾಡಿ ತಕ್ಷಣ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ.

ರಾಜ್ಯದಲ್ಲಿ ಅನೇಕ ಕಡೆ ಕ್ವಾರಿ ದಂಧೆ ನಡೆಯುತ್ತಿದೆ. ರಾಜಕಾರಣಿಗಳ ಹೆಸರು ಹೇಳಿಕೊಂಡು ಲೈಸೆನ್ಸ್‌ ಇಲ್ಲದೆಯೇ ಅನಧಿಕೃತವಾಗಿ ಕ್ವಾರಿ ಗಣಿ ನಡೆಯುತ್ತಿದೆ. ಬೆಂಗಳೂರಿಗೆ 15 ಕಿ.ಮೀ. ದೂರದ ಕ್ವಾರಿಯಲ್ಲಿ ಪರಿಶೀಲನೆ ಮಾಡುವ ಯೋಗ್ಯತೆ ಇಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಜಕ್ಕೂ ಸತ್ತುಹೋಗಿದೆ ಎಂದು ಕಿಡಿಕಾರಿದರು.

R Ashok
ಬಫರ್ ವಲಯದಲ್ಲೇ ಅಕ್ರಮ ಸ್ಫೋಟ, ಸುರಕ್ಷತಾ ನಿಯಮ ಉಲ್ಲಂಘನೆಯೇ ಬೆಂಗಳೂರು ಕ್ವಾರಿ ದುರಂತಕ್ಕೆ ಕಾರಣ..?

ಈ ಘಟನೆಗೆ ಕಾರಣರಾದ ತಪ್ಪಿಸ್ಥರನ್ನು ಬಂಧಿಸಬೇಕು. ಕಾರ್ಮಿಕರ ಕುಟುಂಬಕ್ಕೆ ತಲಾ 50 ಲಕ್ಷ ರು. ಪರಿಹಾರ ನೀಡಬೇಕು. ಗಾಯಾಳುಗಳು ಚೇತರಿಸಿಕೊಳ್ಳಲು ಬಹಳ ಕಾಲ ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಗಾಯಾಳುಗಳಿಗೂ 10 ಲಕ್ಷ ರೂ. ಸಹಾಯ ನೀಡಬೇಕು ಎಂದು ಆಗ್ರಹಿಸಿದರು.

ಕೂಲಿಗಾಗಿ ಬೇರೆ ರಾಜ್ಯದಿಂದ ಬಂದ ಕಾರ್ಮಿಕರು ಮೃತಪಟ್ಟಿದ್ದಾರೆ. ಸರ್ಕಾರ ಅನಧಿಕೃತ ಕ್ವಾರಿ ಗಣಿಗಾರಿಕೆಗೆ ಅವಕಾಶ ನೀಡುವುದು ಸರಿಯಲ್ಲ. ಇದಕ್ಕೆ ಹಿಂದೆಯೂ ಇಂತಹ ಘಟನೆ ನಡೆದಿದ್ದರೂ ಕ್ರಮ ವಹಿಸಿಲ್ಲ. ವಿರೋಧಿಗಳಿದ್ದರೆ ಪೊಲೀಸರು ಹುಡುಕಿಕೊಂಡು ಹೋಗುತ್ತಿದ್ದರು. ಆದರೆ ಇಷ್ಟು ಸಮಯವಾದರೂ ಒಬ್ಬರನ್ನೂ ಬಂಧಿಸಿಲ್ಲ. ಜಿಲ್ಲಾಧಿಕಾರಿಗೆ ಕರೆ ಮಾಡಿದರೆ ಫೋನ್‌ ಕರೆ ಸ್ವೀಕರಿಸುತ್ತಿಲ್ಲ. ಸಚಿವರು ಕೂಡ ಈ ಕಡೆ ಬಂದಿಲ್ಲ. ನಾನು ಸ್ಥಳಕ್ಕೆ ಬಂದು ಕ್ರಮ ವಹಿಸಿ ಎಂದು ಹೇಳುವ ಸ್ಥಿತಿ ಬಂದಿದೆ. ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ದುರಂತ ನಡೆದಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಕ್ರಮ ಕಲ್ಲುಗಣಿ ಚಟುವಟಿಕೆ ವ್ಯಾಪಕವಾಗಿದ್ದು, ರಾಜಕಾರಣಿಗಳ ಹೆಸರಿನಲ್ಲಿ ಕಲ್ಲುಗಣಿ ಪರವಾನಗಿಗಳನ್ನು ಪಡೆಯಲಾಗುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಲ್ಲುಗಣಿ ಚಟುವಟಿಕೆಗಳ ಮೇಲ್ವಿಚಾರಣೆಯಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

R Ashok
ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಕಲ್ಲುಗಣಿ ಮಾಲೀಕರಿಗೆ ಸೂಚನೆ, ಗಣಿಗಾರಿಕೆಗೆ ಸಮಗ್ರ ಮಾರ್ಗಸೂಚಿ CM ಡಿ ಕೆ ಶಿವಕುಮಾರ್-Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com