ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...

ಕೊಲೆಯಾದ ದುರ್ದೈವಿ ಪತಿಯನ್ನು 43 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ(40), ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಇದಕ್ಕೆ ಪುತ್ರ ಸಹ ಸಾಥ್ ನೀಡಿದ್ದಾನೆ. ತಾಯಿ, ಮಗನನ್ನು ಪೊಲೀಸರು ಬಂಧಿಸಿದ್ದಾರೆ.
Woman Smashes Husband's Head With Stone In Davanagere
ಸಾಂದರ್ಭಿಕ ಚಿತ್ರ
Updated on

ದಾವಣಗೆರೆ: ಇತ್ತೀಚಿಗೆ ಹೆಣ್ಣುಮಕ್ಕಳು ತಮ್ಮ ಗಂಡನನ್ನು ಭೀಕರವಾಗಿ ಕೊಲೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಬೆಣ್ಣೆ ನಗರಿ ದಾವಣಗೆರೆಯಲ್ಲೂ ಕೂಡ ಅಂಥದ್ದೇ ಒಂದು ಭೀಕರ ಘಟನೆ ನಡೆದಿದೆ.

ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ಕಿರುಕುಳ ತಾಳಲಾರದೆ, ಪತ್ನಿಯೇ ಆತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ದುರ್ದೈವಿ ಪತಿಯನ್ನು 43 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ(40), ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಇದಕ್ಕೆ ಪುತ್ರ ಸಹ ಸಾಥ್ ನೀಡಿದ್ದಾನೆ. ತಾಯಿ, ಮಗನನ್ನು ಪೊಲೀಸರು ಬಂಧಿಸಿದ್ದಾರೆ.

Woman Smashes Husband's Head With Stone In Davanagere
ಶಿವಮೊಗ್ಗ: ಪತ್ನಿ ಕೊಲೆಗೆ ಪತಿ ಸುಪಾರಿ; ಬುರ್ಖಾ ಧರಿಸಿ ಬಂದ ಭಸ್ಮಾಸುರರಿಗೆ ಸಾರ್ವಜನಿಕರಿಂದಲೇ ಹಿಗ್ಗಾಮುಗ್ಗಾ ಧರ್ಮದೇಟು!

ಶಿವಪ್ಪ, ಪ್ರತಿದಿನ ವಿಪರೀತ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿ ಹಾಗೂ ಕುಟುಂಬಸ್ಥರೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಇಡೀ ಕುಟುಂಬ ಮಾನಸಿಕವಾಗಿ ಜರ್ಜರಿತವಾಗಿತ್ತು. ದಿನೇ ದಿನೇ ಹೆಚ್ಚಾಗುತ್ತಿದ್ದ ಶಿವಪ್ಪನ ಕಾಟ ತಾಳಲಾರದೇ ಪತ್ನಿ ಸಾವಿತ್ರಿ, ಶಿವಪ್ಪನ ತಲೆ ಮೇಲೆ ಕಲ್ಲು ಎತ್ತಿಹಾಕಿ ಅತ್ಯಂತ ಕ್ರೂರವಾಗಿ ಕೊಂದಿದ್ದಾಳೆ.

ಇನ್ನು ತಾಯಿ ಸಾವಿತ್ರಿ ಪತಿಯನ್ನು ಕೊಲೆ ಮಾಡಿದ ಬಳಿಕ, ವಿಷಯ ಮುಚ್ಚಿಡಲು ಮಗ ಹನುಮೇಗೌಡ ಸಾಥ್ ನೀಡಿದ್ದಾನೆ. ತಂದೆಯ ಶವವನ್ನು ಮನೆಯಿಂದ ಬೇರೆಡೆಗೆ ಸಾಗಿಸಿ ಸಾಕ್ಷ್ಯ ನಾಶಪಡಿಸಲು ತಾಯಿಗೆ ಸಂಪೂರ್ಣವಾಗಿ ಸಹಾಯ ಮಾಡಿದ್ದಾನೆ. ಆದರೆ ಪೊಲೀಸರ ತನಿಖೆ ವೇಳೆ ಇವರಿಬ್ಬರ ಪಾಪದ ಕೃತ್ಯ ಬಯಲಾಗಿದೆ.

ಈ ಘಟನೆಯ ಮಾಹಿತಿ ತಿಳಿದ ತಕ್ಷಣ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮನೆಯ ಹಿಂದೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿವಪ್ಪ ಅವರ ಶವವನ್ನು ಕಂಡು ಪೊಲೀಸರು ಆಘಾತಗೊಂಡರು. ಸ್ಥಳಕ್ಕೆ ಸುಕೋ ಟೀಮ್, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು.

ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ತನಿಖೆಯ ವೇಳೆ ಪತ್ನಿ ಮತ್ತು ಪುತ್ರ ಸೇರಿ ಕೊಲೆಗೈದಿರುವುದು ಪತ್ತೆಯಾಗಿದೆ. ಪೊಲೀಸರು ಸಾವಿತ್ರಿ ಮತ್ತು ಹನುಮೇಗೌಡ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com