ಕೊಪ್ಪಳ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಮೃತ ಪ್ರಕಾಶ್ ರಾಯ್ಕರ್ ಅವರು ಗಂಗಾವತಿಯಲ್ಲಿ ಜುವೆಲ್ಲರಿ (ಚಿನ್ನದ ಆಭರಣ) ಅಂಗಡಿಯನ್ನು ನಡೆಸುತ್ತಿದ್ದರು. ಕಳೆದ ಕೆಲವು ಸಮಯದಿಂದ ಅವರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಗಂಗಾವತಿ: ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿಯಲ್ಲಿ ನಡೆದಿದೆ.

ಮೃತರನ್ನು ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಅವರ ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ ಅವರ 21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಎಂದು ಗುರುತಿಸಲಾಗಿದೆ.. ಪ್ರಶಾಂತ್ ನಗರದಲ್ಲಿರುವ ತಮ್ಮ ಸ್ವಗೃಹದಲ್ಲೇ ಮೂವರೂ ಒಟ್ಟಿಗೆ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ.

ಮೃತ ಪ್ರಕಾಶ್ ರಾಯ್ಕರ್ ಅವರು ಗಂಗಾವತಿಯಲ್ಲಿ ಜುವೆಲ್ಲರಿ (ಚಿನ್ನದ ಆಭರಣ) ಅಂಗಡಿಯನ್ನು ನಡೆಸುತ್ತಿದ್ದರು. ಕಳೆದ ಕೆಲವು ಸಮಯದಿಂದ ಅವರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ.

Casual Images
ಹೈದರಾಬಾದ್‌: ಬಾಯ್​ಫ್ರೆಂಡ್​ಗೆ ವಿಡಿಯೋ ಕಾಲ್ ಮಾಡಿ ಹೋಟೆಲ್‌ನಲ್ಲೇ ವಿವಾಹಿತ ಯುವತಿ ಆತ್ಮಹತ್ಯೆ!

ದಿನೇ ದಿನೇ ಹೆಚ್ಚುತ್ತಿದ್ದ ಸಾಲದ ಹೊರೆ ಮತ್ತು ಅದರಿಂದ ಉಂಟಾದ ಮಾನಸಿಕ ಒತ್ತಡವೇ ಈ ಘೋರ ದುರಂತಕ್ಕೆ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಸಿಕ್ಕಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com