70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಂಧಿತ ಮಹಿಳೆಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಝೀನತ್ ಇಬ್ರಾಹಿಂ
ಝೀನತ್ ಇಬ್ರಾಹಿಂ
Updated on

ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನೆಪದಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಂದ 70 ಲಕ್ಷ ರೂ. ಪಡೆದು ವಂಚಿಸಿದ ಮತ್ತು ಹಣ ವಾಪಸ್‌ ಕೇಳಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು ಉಡುಪಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಉಡುಪಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಈ ಮಹಿಳೆ, ಜಂಟಿಯಾಗಿ ಕಚೇರಿ ಆರಂಭಿಸಿದ್ದಳು. ಅಲ್ಲದೇ ಜಮೀನು ಖರೀದಿ ಹೆಸರಿನಲ್ಲಿ 70 ಲಕ್ಷ ರೂ. ಪಡೆದಿದ್ದಳು. ಬಳಿಕ ಆ ಹಣವನ್ನು ವೈಯಕ್ತಿಕ ಕೆಲಸಕ್ಕೆ ಬಳಸಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

ಝೀನತ್ ಇಬ್ರಾಹಿಂ
ಬೆಂಗಳೂರು: ಉದ್ಯಮಿಗೆ 2.66 ಕೋಟಿ ರೂ ವಂಚನೆ; Axis Bank ಮ್ಯಾನೇಜರ್ ಬಂಧನ

ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ

ಉದ್ಯಮಿ ನಷ್ಟದ ಕಾರಣ, ಪಾಲುದಾರಿಕೆ ವ್ಯವಹಾರ ಮುಕ್ತಾಯಗೊಳಿಸಿ ಕಚೇರಿ ಮುಚ್ಚುವ ಸಂದರ್ಭದಲ್ಲಿ ಕೆಲವು ರಹಸ್ಯ ಕಡತಗಳು ಮತ್ತು ಪೆನ್ ಡ್ರೈವ್ ಪತ್ತೆಯಾಗಿದ್ದು, ಅದನ್ನು ಪರಿಶೀಲಿಸಿದಾಗ ರಾಜ್ಯದ ಹಲವಾರು ಪ್ರಭಾವಿ ಗಣ್ಯ ವ್ಯಕ್ತಿಗಳ ಖಾಸಗಿ ಮತ್ತು ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು ಇರುವುದು ಕಂಡುಬಂದು ಉದ್ಯಮಿ ಬೆಚ್ಚಿಬಿದ್ದಿದ್ದಾರೆ. ತಕ್ಷಣ ತಾನು ಕೊಟ್ಟಿದ್ದ 70 ಲಕ್ಷ ಹಣವನ್ನು ವಾಪಸ್ ಕೇಳಿದಾಗ, ಝೀನತ್ ಅಸಲಿ ಮುಖ ತೋರಿಸಿದ್ದಾಳೆ.

ಉದ್ಯಮಿಯ ಹೊಸ ಕಚೇರಿಗೆ ನುಗ್ಗಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಹಣ ನೀಡದಿದ್ದರೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಅಷ್ಟೇ ಅಲ್ಲದೆ, ಉದ್ಯಮಿಯ ಅಶ್ಲೀಲ ವಿಡಿಯೋಗಳು ತನ್ನ ಬಳಿ ಇವೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಇಷ್ಟಕ್ಕೆ ನಿಲ್ಲದ ಈಕೆ ಉದ್ಯಮಿಯ ಪತ್ನಿ ಮತ್ತು ಮಕ್ಕಳನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಉಡುಪಿ ನಗರ ಪೊಲೀಸರು, ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com