SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ: ಗ್ರಾಮ ಆಡಳಿತ ಅಧಿಕಾರಿ ಪರಿಸ್ಥಿತಿ ಗಂಭೀರ!

ಭಾವನಾ (26) ಗಂಭೀರ ಗಾಯಗೊಂಡಿರುವ ಗ್ರಾಮ ಆಡಳಿತಾಧಿಕಾರಿ. ಇವರು ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.
VAO critical condition
ಗಂಭೀರವಾಗಿ ಗಾಯಗೊಂಡಿರುವ ಗ್ರಾಮ ಆಡಳಿತ ಅಧಿಕಾರಿ
Updated on

ತುಮಕೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಆಡಳಿತಾಧಿಕಾರಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ ಗೂಳೂರಿನಲ್ಲಿ ನಡೆದಿದೆ.

ಭಾವನಾ (26) ಗಂಭೀರ ಗಾಯಗೊಂಡಿರುವ ಗ್ರಾಮ ಆಡಳಿತಾಧಿಕಾರಿ. ಇವರು ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಬಳಿಕ ಅವರನ್ನು ಸಿದ್ದಗಂಗಾ ಆಸ್ಪತ್ರೆಯ ಐಸಿಯುಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿದ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸದ ಒತ್ತಡವೇ ಈ ಘಟನೆಗೆ ಕಾರಣ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಆಲಿಸಿದ್ದಾರೆ.

ಜಿಲ್ಲಾಧಿಕಾರಿಗಳ ವಿರುದ್ಧ ಭಾವನಾ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ರಾತ್ರಿ 10 ಗಂಟೆವರೆಗೆ ಮೀಟಿಂಗ್ ಮಾಡುತ್ತೀರಿ. ಬೆಳಗ್ಗೆ 6 ಗಂಟೆಗೆ ಮತ್ತೆ ಕೆಲಸಕ್ಕೆ ಕರೆಯುತ್ತೀರಿ. ನಿಮಗೆ ರ‍್ಯಾಂಕಿಂಗ್ ಬೇಕು, ಪ್ರೊಮೋಷನ್ ಬೇಕು. ಅದಕ್ಕೆ ನಮ್ಮ ಮಕ್ಕಳನ್ನು ಬಲಿ ಕೊಡುತ್ತೀರಾ ಎಂದು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com