ಬಾಗಲಕೋಟೆ: ಸರ್ಕಾರಿ ಶಾಲೆಯ ಗೇಟ್ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ!

ಆಕೆಯ ಮೇಲೆ ಶಾಲೆಯ ಮುಖ್ಯ ದ್ವಾರದ ಗೇಟ್ ಕುಸಿದು ಬಿದ್ದ ನಂತರ ತೀವ್ರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೂಗಿಗೆ ಬಲವಾದ ಪೆಟ್ಟು ಬಿದ್ದಿದ್ದು,‌ ಕಿವಿಯಿಂದಲೂ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ.
Balakundi Government Higher Primary School
ಬಲಕುಂದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ
Updated on

ಬಲಕುಂದಿ: ಸರ್ಕಾರಿ ಶಾಲೆಯ ಮುಖ್ಯದ್ವಾರದ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿಯನ್ನು ನಯನಾ ಕುಮಾರಿ ಎಂದು ಗುರುತಿಸಲಾಗಿದೆ.

ಆಕೆಯ ಮೇಲೆ ಶಾಲೆಯ ಮುಖ್ಯ ದ್ವಾರದ ಗೇಟ್ ಕುಸಿದು ಬಿದ್ದ ನಂತರ ತೀವ್ರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೂಗಿಗೆ ಬಲವಾದ ಪೆಟ್ಟು ಬಿದ್ದಿದ್ದು,‌ ಕಿವಿಯಿಂದಲೂ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ.

ಆಕೆಯನ್ನು ಮೊದಲಿಗೆ ಇಳಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಇತರ ವಿದ್ಯಾರ್ಥಿಗಳು ಇಳಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Balakundi Government Higher Primary School
ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ

15 ‌ದಿನಗಳ ಹಿಂದಷ್ಟೇ ಗೇಟ್ ಬಿದ್ದಾಗಲೂ ಅಪಾಯ ತಪ್ಪಿತ್ತು. ಕಳಪೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಗೇಟ್ ನ ಬಗ್ಗೆ ಪದೇ ಪದೇ ದೂರು ಸಲ್ಲಿಸಿದರೂ ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com