BJP ಶಾಸಕ ಸುರೇಶ್ ಕುಮಾರ್ ವಿರುದ್ಧ 300 ಕೋಟಿ ರೂ. ಗೋಲ್ಮಾಲ್‌ ಆರೋಪ; ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ, ಭಾರೀ ಹೈಡ್ರಾಮಾ!

ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು 300 ಕೋಟಿ ರೂಪಾಯಿ ಟೆಂಡರ್ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
Congress protests against Rajajinagar BJP MLA Suresh Kumar over biased contracts
ಸುರೇಶ್ ಕುಮಾರ್
Updated on

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಪಾಲಿಕೆ ವತಿಯಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಗಳಲ್ಲಿ ನಿಯಮಬಾಹಿರವಾಗಿ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು 300 ಕೋಟಿ ರೂಪಾಯಿ ಟೆಂಡರ್ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಸುರೇಶ್ ಕುಮಾರ್ ಅವರು ಇಂದು ರಾಜಾಜಿನಗರದ ಆರ್‌ಟಿಒ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ‌ NSUI ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು, ಶಾಸಕರಿಗೆ ಮುತ್ತಿಗೆಗೆ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರೀ ಹೈಡ್ರಾಮಾವೇ ನಡೆಯಿತು.

Congress protests against Rajajinagar BJP MLA Suresh Kumar over biased contracts
ಬೇನಾಮಿ ಗುತ್ತಿಗೆದಾರರಿಗೆ ಲಾಭ ಆರೋಪ, ಲೋಕಾಯುಕ್ತಕ್ಕೆ ದೂರು: ನಿಷ್ಪಕ್ಷಪಾತ ತನಿಖೆಗೆ MLA ಎಸ್ ಸುರೇಶ್ ಕುಮಾರ್ ಆಗ್ರಹ!

ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಆಗಮಿಸುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರ್‌ಟಿಒ ರಸ್ತೆ ಕ್ಲೋಸ್ ಮಾಡಿದ್ದಾರೆ. ರಸ್ತೆಯ ಎರಡು ಬದಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್‌ ಮಾಡಿಸಿದ್ದಾರೆ. ಜೊತೆಗೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಮುತ್ತಿಗೆಗೆ ಯತ್ನ

ಸುರೇಶ್‌ ಕುಮಾರ್‌ ಅವರ ವಿರುದ್ಧ ಧಿಕ್ಕಾರ ಕೂಗುತ್ತಲೇ ಆರ್‌ಟಿಒ ಕಚೇರಿ ಬಳಿ ಆಗಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಆರ್‌ಟಿಒ ಕಚೇರಿ ಒಳನುಗ್ಗಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಅಷ್ಟರಲ್ಲಿ ಬ್ಯಾರಿಕೇಡ್‌ ಅಳವಡಿಸಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com