ಬೀದರ್ ನ ಬಸವ ಕಲ್ಯಾಣ ಮೂಲಕ ಉತ್ತರ ಕರ್ನಾಟಕ ಪ್ರವಾಸ ಆರಂಭಿಸಿದ CM ಡಿ ಕೆ ಶಿವಕುಮಾರ್-Video

ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಹೆಸರಾದ ಬಸವಕಲ್ಯಾಣವನ್ನು ಆಧುನಿಕ ಪ್ರಜಾಪ್ರಭುತ್ವದ ತೊಟ್ಟಿಲು ಹಾಗೂ ಬಸವೇಶ್ವರರ ಕರ್ಮಭೂಮಿ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ.
D.K. Shivakumar with members of Akka Pade at Basava Kalyan in Bidar district on Monday
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅಕ್ಕ ಪಡೆ ಸದಸ್ಯರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Updated on

ಬೀದರ್ ಜಿಲ್ಲೆ ಬಸವಕಲ್ಯಾಣದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದರು. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರ ಪವಿತ್ರ ಕರ್ಮಭೂಮಿ ಹಾಗೂ ಐತಿಹಾಸಿಕ ಅನುಭವ ಮಂಟಪದ ನೆಲ ಎಂಬ ವಿಶೇಷ ಮಹತ್ವ ಹೊಂದಿರುವ ಕಾರಣಕ್ಕೆ ಬಸವಕಲ್ಯಾಣವನ್ನು ಪ್ರವಾಸದ ಆರಂಭಿಕ ತಾಣವಾಗಿ ಸಿಎಂ ಡಿ ಕೆ ಶಿವಕುಮಾರ್ ಆಯ್ಕೆಮಾಡಿಕೊಂಡಿದ್ದಾರೆ.

ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಹೆಸರಾದ ಬಸವಕಲ್ಯಾಣವನ್ನು ಆಧುನಿಕ ಪ್ರಜಾಪ್ರಭುತ್ವದ ತೊಟ್ಟಿಲು ಹಾಗೂ ಬಸವೇಶ್ವರರ ಕರ್ಮಭೂಮಿ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ.

D.K. Shivakumar with members of Akka Pade at Basava Kalyan in Bidar district on Monday
'ಪಾದಚಾರಿ ಮಾರ್ಗ ತೆರವಿನಿಂದ ಜೀವನೋಪಾಯ ಕಳೆದುಕೊಂಡ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ' : CM ಡಿ.ಕೆ. ಶಿವಕುಮಾರ್-Video

ಪ್ರವಾಸದ ವೇಳೆ ಡಿ.ಕೆ. ಶಿವಕುಮಾರ್, ನಿರ್ಮಾಣ ಹಂತದಲ್ಲಿರುವ ನೂತನ ಅನುಭವ ಮಂಟಪ ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿದರು. ಇದು ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ಜ್ಞಾನ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.

ಈ ಹಿಂದೆ ಕರ್ನಾಟಕ ಸರ್ಕಾರ ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತ್ತು. ಆ ಪರಂಪರೆಯನ್ನು ಮುಂದುವರಿಸುವ ಬದ್ಧತೆಯನ್ನು ಪ್ರಸ್ತುತ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

D.K. Shivakumar with members of Akka Pade at Basava Kalyan in Bidar district on Monday
ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆ: ಹಾವೇರಿಯ 6 ಶಾಸಕರಿಂದ ಮೋಡ ಬಿತ್ತನೆ ಕಾರ್ಯ ಆರಂಭ

ಭೇಟಿಯ ವೇಳೆ ಮುಖ್ಯಮಂತ್ರಿಗಳು ಸ್ಥಳೀಯ ಮಠಾಧೀಶರು, ಶರಣರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ತಳಮಟ್ಟದ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X
Kannada Prabha
www.kannadaprabha.com