ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ!

ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪ್ರತ್ಯೇಕವಾದ ಸಹಾಯ ಮತ್ತು ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕೇಂದ್ರಗಳು ಸಾರ್ವಜನಿಕರು ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕಂಪ್ಯೂಟರ್, ಇಂಟರ್ ನೆಟ್- ಪ್ರಿಂಟರ್, ಸ್ಕ್ಯಾನರ್ ಸೌಲಭ್ಯ ಹೊಂದಿರಬೇಕು. ಅಲ್ಲದೇ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಲಾಗಿದೆ.

ಸಹಾಯ ಮತ್ತು ಸೌಲಭ್ಯ ಕೌಂಟರ್ ಗಳಲ್ಲಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಪ್ರದರ್ಶಿಸಬೇಕು. ಇವುಗಳನ್ನು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Casual Images
ವೃದ್ಧರು, ಹಾಸಿಗೆ ಹಿಡಿದವರ ಆರೈಕೆ: ಪ್ಯಾಲಿಯೇಟಿವ್ ಕೇರ್ ಪ್ರಾರಂಭಿಸಿದ ಉಡುಪಿ ಜಿಲ್ಲೆಯ ವಂಡ್ಸೆ ಗ್ರಾಮ ಪಂಚಾಯಿತಿ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಸಹಾಯ ಮತ್ತು ಸೌಲಭ್ಯ ಕೌಂಟರ್ ಗಳ ಕಾರ್ಯನಿರ್ವಹಣೆಯ ಒಟ್ಟಾರೇ ಉಸ್ತುವಾರಿ ನೋಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರ್ ಗಳನ್ನು ಸ್ಥಾಪಿಸಲು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೈಯಕ್ತಿಕ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com