ಕಾರವಾರ: ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; 7 ಯುವಕರು ಸ್ಥಳದಲ್ಲೇ ಸಾವು; Video

ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು
ಅಪಘಾತವಾದ ಲಾರಿ ಮತ್ತು ಕ್ರೂಸರ್
ಅಪಘಾತವಾದ ಲಾರಿ ಮತ್ತು ಕ್ರೂಸರ್
Updated on

ಕಾರವಾರ: ಲಾರಿ ಹಾಗೂ ಕ್ರೂಸರ್ ( ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರೆಬೈಲಿನಲ್ಲಿ ನಡೆದಿದೆ.

ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ.

ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ (ಜು.8) ರಾತ್ರಿ ಇವರೆಲ್ಲರೂ ಸೇರಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆಂದು ಹೊರಟಿದ್ದರು.

ಕ್ರೂಸರ್ ಚಾಲಕ ಸಂಜೀವ್ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ, ರಸ್ತೆಯ ಬಲಭಾಗಕ್ಕೆ ತಿರುಗಿ ಅಂಕೋಲಾದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ಪರಿಣಾಮವಾಗಿ ವಾಹನವು ನಜ್ಜುಗುಜ್ಜಾಗಿದೆ. ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತವಾದ ಲಾರಿ ಮತ್ತು ಕ್ರೂಸರ್
ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com