ಬೆಂಗಳೂರು ದಕ್ಷಿಣದಲ್ಲಿ ಎರಡನೇ ಏರ್ ಪೋರ್ಟ್, ಕಾರ್ಯಸಾಧ್ಯತಾ ವರದಿ ಸೆಪ್ಟೆಂಬರ್ ವೇಳೆಗೆ ಸಿದ್ಧ: CM ಡಿ ಕೆ ಶಿವಕುಮಾರ್-Video

ಅಧಿಕೃತ ಮೂಲಗಳ ಪ್ರಕಾರ, ಇದು ಪ್ರಾಥಮಿಕ ಹಂತದ ಪರಿಶೀಲನಾ ಸಭೆಯಾಗಿದ್ದು, ಯೋಜನೆಯ ಪ್ರಸ್ತುತ ಸ್ಥಿತಿಯ ಕುರಿತು ಮಾಹಿತಿ ಪಡೆಯುವುದೇ ಮುಖ್ಯ ಉದ್ದೇಶವಾಗಿತ್ತು. ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
CM D K Shivakumar held meeting about Bengaluru's second airport
ಬೆಂಗಳೂರಿನ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಡಿ ಕೆ ಶಿವಕುಮಾರ್ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದರು.
Updated on

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಸ್ತಾವಿತವಾಗಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಕಾರ್ಯಸಾಧ್ಯತಾ (Feasibility report) ವರದಿ ಸೆಪ್ಟೆಂಬರ್ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದ್ದು, ಅದರ ಬಳಿಕ ರಾಜ್ಯ ಸರ್ಕಾರ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಬುಧವಾರ ಈ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ಸಭೆ ನಡೆಸಿದ್ದರು. ಅಧಿಕೃತ ಮೂಲಗಳ ಪ್ರಕಾರ, ಇದು ಪ್ರಾಥಮಿಕ ಹಂತದ ಪರಿಶೀಲನಾ ಸಭೆಯಾಗಿದ್ದು, ಯೋಜನೆಯ ಪ್ರಸ್ತುತ ಸ್ಥಿತಿಯ ಕುರಿತು ಮಾಹಿತಿ ಪಡೆಯುವುದೇ ಮುಖ್ಯ ಉದ್ದೇಶವಾಗಿತ್ತು. ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಈಗಾಗಲೇ ಪೂರ್ವ ಕಾರ್ಯಸಾಧ್ಯತಾ ಅಧ್ಯಯನವನ್ನು ಪೂರ್ಣಗೊಳಿಸಿದೆ. ವಿವರವಾದ ಪರಿಶೀಲನೆಗಾಗಿ ಚೂಡಹಳ್ಳಿ, ಕನಕಪುರ ಸಮೀಪದ ಹರೋಹಳ್ಳಿ ಹಾಗೂ ನೆಲಮಂಗಲ ಸೇರಿದಂತೆ ನಾಲ್ಕು ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಸಂಬಂಧಿತ ಸಂಸ್ಥೆಗಳು ಪ್ರಸ್ತುತ ತಾಂತ್ರಿಕ, ಆರ್ಥಿಕ ಹಾಗೂ ಹಣಕಾಸು ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸುತ್ತಿವೆ. ಇದರ ಜೊತೆಗೆ ಪರಿಸರದ ಮೇಲೆ ಬೀರುವ ಪರಿಣಾಮ, ಭೂಮಿಯ ಬೆಲೆ, ಪ್ರಯಾಣಿಕರ ದಟ್ಟಣೆ ಹಾಗೂ ಸರಕು ಸಾಗಣೆ (Cargo) ಸೇರಿದಂತೆ ಇತರ ಅಂಶಗಳನ್ನೂ ಪರಿಶೀಲಿಸಲಾಗುತ್ತಿದೆ.

CM D K Shivakumar held meeting about Bengaluru's second airport
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ಬೆಂಗಳೂರು ದಕ್ಷಿಣದಲ್ಲಿ ಎರಡನೇ ವಿಮಾನ ನಿಲ್ದಾಣ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆಗೊಳಿಸುವ ಉದ್ದೇಶದಿಂದ ನಗರದ ಎರಡನೇ ವಿಮಾನ ನಿಲ್ದಾಣವನ್ನು ದಕ್ಷಿಣ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಕಡಿಮೆ ಭೂಸ್ವಾಧೀನ ವೆಚ್ಚ, ಹೆಚ್ಚು ಗುಡ್ಡಗಾಡು ಪ್ರದೇಶವಲ್ಲದ ಹಾಗೂ ತಾಂತ್ರಿಕವಾಗಿ ಕಾರ್ಯಸಾಧ್ಯವಾದ ಸ್ಥಳವನ್ನು ಗುರುತಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಈ ಹಂತದಲ್ಲಿ ಯಾವುದೇ ನಿರ್ದಿಷ್ಟ ಸ್ಥಳವನ್ನು ಅಂತಿಮಗೊಳಿಸಲಾಗಿಲ್ಲ. ಆದರೆ ಈ ಹಿಂದೆ ಪ್ರಸ್ತಾಪಿಸಲಾಗಿದ್ದ ಸ್ಥಳಗಳಂತೆ ವಿಮಾನ ನಿಲ್ದಾಣವು ದಕ್ಷಿಣ ಬೆಂಗಳೂರಿನಲ್ಲಿಯೇ ಸ್ಥಾಪನೆಯಾಗಲಿದೆ. ಜೊತೆಗೆ, ಯೋಜನೆಗಾಗಿ ಯಾವುದೇ ಗ್ರಾಮಕ್ಕೆ ತೊಂದರೆಯಾಗಬಾರದು ಹಾಗೂ ಗ್ರಾಮಸ್ಥರನ್ನು ಸ್ಥಳಾಂತರಿಸಬಾರದು ಎಂಬುದು ಸರ್ಕಾರದ ನಿಲುವಾಗಿದೆ ಎಂದು ತಿಳಿಸಿದರು.

ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಪರಿಶೀಲನಾ ಸಭೆ ನಡೆಸಿದರು.

CM D K Shivakumar held meeting about Bengaluru's second airport
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣದ ಕುರಿತು ಈ ಹಿಂದೆ ನಡೆದಿರುವ ಎಲ್ಲ ಬೆಳವಣಿಗೆಗಳನ್ನು ಪರಿಶೀಲಿಸಿದ್ದೇವೆ. ಯಾವುದೇ ಗ್ರಾಮಕ್ಕೆ ತೊಂದರೆಯಾಗಬಾರದು ಮತ್ತು ಗ್ರಾಮಸ್ಥರನ್ನು ಸ್ಥಳಾಂತರಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ಭೂಮಿಯ ಬೆಲೆ ಕಡಿಮೆ ಇರುವ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ಮತ್ತು ಹೆಚ್ಚು ಗುಡ್ಡಗಾಡು ಪ್ರದೇಶವಲ್ಲದ ಸ್ಥಳವನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇವೆ ಎಂದು ಹೇಳಿದರು.

ಭೂಸ್ವಾಧೀನ ವೆಚ್ಚ ಕಡಿಮೆ ಇರುವ ಸ್ಥಳವನ್ನು ಆಯ್ಕೆ ಮಾಡಿದರೆ ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಯಾವುದೇ ಗ್ರಾಮವನ್ನು ಸ್ಥಳಾಂತರಿಸುವ ಅಗತ್ಯವಿಲ್ಲದ ಸ್ಥಳಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ್ದೇವೆ. ಅಲ್ಲಲ್ಲಿ ಕೆಲವೇ ಮನೆಗಳಿದ್ದರೆ ಅವರಿಗೆ ಸೂಕ್ತ ಪರಿಹಾರ ನೀಡಬಹುದು. ಆದರೆ ಯೋಜನೆಗಾಗಿ ಇಡೀ ಗ್ರಾಮವನ್ನು ಸ್ಥಳಾಂತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ಮಾರ್ಚ್ ತಿಂಗಳಲ್ಲಿ ಮಂಡಿಸಲಾದ ರಾಜ್ಯ ಬಜೆಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿ ಬೆಳೆದಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಘೋಷಿಸಿದ್ದರು. ಈ ಯೋಜನೆಗೆ ಸಂಬಂಧಿಸಿದ ಕಾರ್ಯಸಾಧ್ಯತಾ ವರದಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)ದ ತಾಂತ್ರಿಕ ಸಲಹೆಯ ಆಧಾರದ ಮೇಲೆ ಸಿದ್ಧಪಡಿಸಲಾಗುವುದು ಎಂದೂ ತಿಳಿಸಿದ್ದರು.

ಈಗಾಗಲೇ ಎಎಐ ಅಧಿಕಾರಿಗಳು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಈ ಹಿಂದೆ ಆಯ್ಕೆ ಮಾಡಲಾಗಿದ್ದ ಮೂರು ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಅವುಗಳಲ್ಲಿ ದಕ್ಷಿಣ ಬೆಂಗಳೂರಿನ ಕನಕಪುರ ರಸ್ತೆಯ ಹಾರೋಹಳ್ಳಿ ಸಮೀಪದ ಎರಡು ಸ್ಥಳಗಳು ಹಾಗೂ ನಗರದ ಪಶ್ಚಿಮ ಭಾಗದಲ್ಲಿರುವ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಸ್ಥಳ ಸೇರಿವೆ.

ಒಟ್ಟಾರೆಯಾಗಿ, ಭೂಸ್ವಾಧೀನ ವೆಚ್ಚ, ತಾಂತ್ರಿಕ ಕಾರ್ಯಸಾಧ್ಯತೆ ಹಾಗೂ ಗ್ರಾಮಗಳ ಸ್ಥಳಾಂತರ ತಪ್ಪಿಸುವುದು ಎಂಬ ಮೂರು ಪ್ರಮುಖ ಮಾನದಂಡಗಳನ್ನು ಆಧರಿಸಿ, ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ದಕ್ಷಿಣ ಬೆಂಗಳೂರಿನಲ್ಲಿ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com