ದೇವಾಲಯಗಳ ಹುಂಡಿ ಮೇಲೆ ತೀವ್ರ ನಿಗಾ; ಕುಡಿಯುವ ನೀರಿಗೆ ಪ್ರತಿ ಕ್ಷೇತ್ರಕ್ಕೆ ತಲಾ ₹1 ಕೋಟಿ: ಸಿಎಂ ಡಿಕೆಶಿ ಹಲವು ಘೋಷಣೆ

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಶಿವಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
Govt to install CCTV in major Muzrai temples after Ram temple donation row, says CM DK Shivakumar
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
Updated on

ಬೆಳಗಾವಿ: "ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಶಿವಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

"ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಆರಂಭಿಸಿದ್ದೇನೆ. ಈ ಸಭೆಯಲ್ಲಿ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಭೀಕರ ಬರಗಾಲದ ಎಚ್ಚರಿಕೆ ರವಾನಿಸಿದ್ದು, ನಮ್ಮಲ್ಲೂ ವಾಡಿಕೆ ಮಳೆ ಆಗಿಲ್ಲ" ಎಂದರು.

Govt to install CCTV in major Muzrai temples after Ram temple donation row, says CM DK Shivakumar
ಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

"ಬರಗಾಲ ಪರಿಸ್ಥಿತಿಯಲ್ಲಿ ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇವೆ. ಸುಮಾರು 50ಕ್ಕೂ ಹೆಚ್ಚು ಶಾಸಕರು, ಸಂಸದರು ಅನೇಕರು ಸಲಹೆ ನೀಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರ, ಜಿಲ್ಲಾಧಿಕಾರಿಗಳಿಗೆ ಅನುದಾನ ನೀಡಿದೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ನಮ್ಮ ಸರ್ಕಾರ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಈ ತೀರ್ಮಾನ ಮಾಡಲಾಗಿದೆ. ಸ್ಥಳೀಯ ಶಾಸಕರು ಈ ಬಗ್ಗೆ ಅಧ್ಯಯನ ಮಾಡಿ ಯೋಜನೆ ರೂಪಿಸಬೇಕು. ಮುಂದಿನ ದಿನಗಳಲ್ಲಿ ನೀರಾವರಿಗೆ ನೀರು ಲಭ್ಯವಾಗುತ್ತದೆಯೋ ಇಲ್ಲವೋ, ಕುಡಿಯುವ ನೀರಿನ ಪೂರೈಕೆಗೆ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸೂಚಿಸಲಾಗಿದೆ" ಎಂದರು.

ರಸಗೊಬ್ಬರ ದಾಸ್ತಾನಿಗೆ ಅಧಿಕಾರಿಗಳಿಗೆ ಸೂಚನೆ

ರಸಗೊಬ್ಬರ ವಿಚಾರವಾಗಿ ಬೆಂಗಳೂರಿನಲ್ಲಿ ಸಭೆ ಮಾಡಲಾಗುವುದು. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಕೇಂದ್ರ ಸರ್ಕಾರ ಕೇವಲ 50% ಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರ ದಾಸ್ತಾನಿಗೆ ಸೂಚಿಸಲಾಗಿದೆ.

ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗುತ್ತಿದೆ ಎಂಬ ದೂರುಗಳು ಬಂದಿದ್ದು, 60 ಕ್ಕೂ ಹೆಚ್ಚು ಜಾಗಗಳಲ್ಲಿ ಪೈಪ್ ಲೈನ್ ಹಾಕಲು ಸಮಸ್ಯೆಯಾಗಿದೆ ಎಂದು ತಿಳಿದು ಬಂದಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಗೆ ತೊಂದರೆ ನೀಡಬಾರದು ಎಂದು ಸೂಚಿಸಿದ್ದೇನೆ" ಎಂದು ಮಾಹಿತಿ ನೀಡಿದರು.

"ಅರಣ್ಯ ಹಕ್ಕು ವಿಚಾರವಾಗಿ ಯಾರನ್ನೂ ಒಕ್ಕಲೆಬ್ಬಿಸಬಾರದು. ಕಾನೂನು ಚೌಕಟ್ಟಿನಲ್ಲಿ, ಅವರಿಗೆ ಸಿಗಬೇಕಾದ ಹಕ್ಕು ನೀಡಬೇಕು. ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ವಾಸ ಮಾಡಿರುವವರನ್ನು ರಕ್ಷಣೆ ಮಾಡುವುದು ನಮ್ಮ ಸಂಕಲ್ಪ" ಎಂದರು.

ರಾಜ್ಯದ ಮುಜರಾಯಿ ದೇವಾಲಯಗಳ ಹುಂಡಿಗಳ ಮೇಲೆ ತೀವ್ರ ನಿಗಾ, ರಕ್ಷಣೆಗೆ ಸಿಸಿಟಿವಿ

"ರಾಮ ಮಂದಿರ ದೇಣಿಗೆ ವಿಚಾರದಲ್ಲಿ ನಡೆದಿರುವ ಅಕ್ರಮ ಭಕ್ತರಿಗೆ ಅಗೌರವ ತಂದಿದೆ. ಜನರು ಭಕ್ತಿಯಿಂದ ದೇಣಿಗೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಲೂಟಿ ಮಾಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ದೇವಾಲಗಳ ಮೇಲೆ ತೀವ್ರ ನಿಗಾ ವಹಿಸಲಾಗುವುದು ಮತ್ತು ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಕಡ್ಡಾಯವಾಗಿ ಹುಂಡಿಯ ಮುಂದೆ ಸಿಸಿಟಿವಿ ಅಳವಡಿಕೆಗೆ ತೀರ್ಮಾನಿಸಲಾಗಿದೆ. ಹುಂಡಿ, ಹಣ ತೆಗೆಯುವ ಹಾಗೂ ಅದನ್ನು ಎಣಿಸುವ ಜಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಎಸ್ ಪಿ ಕಚೇರಿಗೆ, ಉಪ ಆಯುಕ್ತರ ಕಚೇರಿಗೆ ರವಾನೆಯಾಗುವ ವ್ಯವಸ್ಥೆ ಮಾಡಲಾಗುವುದು" ಎಂದು ಸಿಎಂ ವಿವರಿಸಿದರು.

ಗ್ಯಾರಂಟಿ ಯೋಜನೆ ನಿಲ್ಲಲ್ಲ, ಅಕ್ರಮ ತಡೆಯಲು ಪರಿಶೀಲನೆ

"ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆ ದುರ್ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮಾಡುತ್ತಿದ್ದೇವೆ. ಸತ್ತವರ ಹೆಸರಿನಲ್ಲಿ ನೂರಾರು ಕೋಟಿ ಹಣ ಪಡೆದಿದ್ದಾರೆ. ಇದನ್ನು ತಡೆಯಲು, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಮರುಸಂಗ್ರಹ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ತೀರ್ಮಾನ ಮಾಡಿದ ಯಾವುದೇ ಕಾರ್ಯಕ್ರಮ ನಿಲ್ಲಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

Govt to install CCTV in major Muzrai temples after Ram temple donation row, says CM DK Shivakumar
ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್ ನಿರ್ಧಾರ; ಕೊಟ್ಟ ಪಟ್ಟಿ ಅನುಷ್ಠಾನಗೊಳಿಸುವುದು ನನ್ನ ಕೆಲಸ: CM ಡಿ.ಕೆ ಶಿವಕುಮಾರ್

ಮೋಡ ಬಿತ್ತನೆ ಬಗ್ಗೆ ಸಭೆ ನಡೆಸಿ ತೀರ್ಮಾನ

"ಮೋಡ ಬಿತ್ತನೆ ವಿಚಾರವನ್ನು 10ಕ್ಕೂ ಹೆಚ್ಚು ಶಾಸಕರು ಪ್ರಸ್ತಾಪಿಸಿದ್ದು, ಇತ್ತೀಚೆಗೆ ಕೆಲವು ಶಾಸಕರು ತಾವೇ ಹಣ ಹಾಕಿ ಈ ಪ್ರಯೋಗ ಮಾಡಿದ್ದು, ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವರದಿ ತರಿಸಿಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು" ಎಂದು ಮಾಹಿತಿ ನೀಡಿದರು.

ತುಂಗಭದ್ರಾ ವಿಚಾರವಾಗಿ ಐತಿಹಾಸಿಕ ತೀರ್ಮಾನ

"ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲಾ 33 ಗೇಟ್ ಬದಲಾವಣೆ ಮಾಡಿದ್ದೇವೆ. ಟಿಬಿ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವರಾದ ಸಿಆರ್ ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸಿಎಂಗಳು ಮೊದಲ ಬಾರಿಗೆ ಸಭೆ ಮಾಡಿ, ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಟಡದೇ ರೈತರ ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ" ಎಂದು ವಿವರಿಸಿದರು.

ಇನ್ನು ಆಲಮಟ್ಟಿ ಜಲಾಶಯ ಹಿನ್ನೀರಿನ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ ಎಂಬ ವರದಿಗಾರರ ಪ್ರಶ್ನೆಗೆ, "ಆಲಮಟ್ಟಿ ರೈತರಿಗೆ ಪರಿಹಾರ ನೀಡಲು ಬೆಳಗಾವಿ ಅಧಿವೇಶನದಲ್ಲಿ ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರು ಇದ್ದಾಗಲೇ ಕೆಲವರಿಗೆ ಪರಿಹಾರ ವಿತರಣೆ ಆಗಿದೆ. ಹಂತ ಹಂತವಾಗಿ ಈ ಕಾರ್ಯ ನಡೆಯಲಿದೆ. ಪರಿಹಾರ ನೀಡಲು ಸುಮಾರು ₹70 ಸಾವಿರ ಕೋಟಿಯಿಂದ 1 ಲಕ್ಷ ಕೋಟಿವರೆಗೆ ಹಣ ಬೇಕಾಗುತ್ತದೆ. ಪುನರ್ ವಸತಿ ವಿಚಾರವಾಗಿ ನಾವು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಕೋರ್ಟ್ ಮೆಟ್ಟಿಲೇರಿ, 10-12 ಕೋಟಿಗೆ ಆದೇಶ ಪಡೆದಿದ್ದರು. ಇದರ ಮರುಪರಿಶೀಲನೆ ಅರ್ಜಿ ಹಾಕಲಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜಮೀನು ಕಳೆದುಕೊಂಡವನಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com