ಮಂತ್ರಿಗಿರಿ ರಹಸ್ಯ?: ಸಿಎಂ DK Shivakumar ಭೇಟಿಯಾದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕುಟುಂಬ!

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಈ ಭೇಟಿಯ ವೇಳೆ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಕೆಲ ಕಾಲ ಮಾತುಕತೆ ನಡೆಸಿದರು. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
Lakshmi Hebbalkar, along with her family Met CM Dk Shivakumar
ಸಿಎಂ ಡಿಕೆ ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್
Updated on

ಬೆಳಗಾವಿ: ಮಹತ್ವದ ಬೆಳವಣಿಗೆಯಲ್ಲಿ ಬೆಳಗಾವಿಯಲ್ಲಿರುವ ಸಿಎಂ ಡಿಕೆ ಶಿವಕುಮಾರ್ ಅವರ ಅಧಿಕೃತ ಕಚೇರಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬದೊಂದಿಗೆ ಭೇಟಿ ಮಾಡಿದರು.

ಹೌದು.. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬದೊಂದಿಗೆ ಭೇಟಿ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಈ ಭೇಟಿಯ ವೇಳೆ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಕೆಲ ಕಾಲ ಮಾತುಕತೆ ನಡೆಸಿದರು. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಮೊದಲೇ ಬಂದಿದ್ದ ಲಕ್ಷ್ಮಿ ಹೆಬ್ಬಾಳ್ಕರ್

ಇನ್ನು ಈ ಸಭೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ ಗಿರಿಜಾ ಹಟ್ಟಿಹೊಳಿ. ಸಹೋದರಿಯರಿಬ್ಬರು ಟಿಫನ್ ತೆಗೆದುಕೊಂಡು ಆಗಮಿಸಿದ್ದಾರೆ. ಇದಕ್ಕೂ ಮೊದಲೇ ಮತ್ತೊಂದು ವಾಹನದಲ್ಲಿ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಮತ್ತು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ ಎನ್ನಲಾಗಿದೆ.

Lakshmi Hebbalkar, along with her family Met CM Dk Shivakumar
ಆಷಾಢಕ್ಕೂ ಮುನ್ನ ಸಂಪುಟ ವಿಸ್ತರಣೆ: ಜುಲೈ13 ರಂದು ನೂತನ ಸಚಿವರ ಪ್ರಮಾಣ ವಚನ? ಕೌತುಕ ಹೆಚ್ಚಿಸಿದ ಸಿಎಂ-ಗವರ್ನರ್ ಭೇಟಿ!

ಮಂತ್ರಿಗಿರಿ ರಹಸ್ಯ

ಆದರೆ, ಸಭೆಯಲ್ಲಿ ಯಾವ ವಿಷಯಗಳ ಕುರಿತು ಚರ್ಚೆ ನಡೆಯಿತು ಎಂಬ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. ಆದರೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ವಿಚಾರವಾಗಿ ಚರ್ಚೆ ನಡೆಸಿದರೇ? ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿವಿಧ ಕಾಂಗ್ರೆಸ್ ನಾಯಕರು ಹಾಗೂ ಶಾಸಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಈ ಭೇಟಿಯೂ ಆ ರಾಜಕೀಯ ಬೆಳವಣಿಗೆಗಳ ನಡುವೆಯೇ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com