ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು; ಬಾಲ್ಯವಿವಾಹ ಮಾಡಿಸಿದ ಪೋಷಕರು-ಪತಿಗೂ ಶಿಕ್ಷೆ..!

2024ರ ಸೆಪ್ಟೆಂಬರ್ 5ರಂದು ನಾಗಪ್ಪ ಚಡಬನೂರ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಹಣ ತಂದುಕೊಂಡು ಬರುತ್ತೇನೆ ಎಂದು ಹೇಳಿ ವಾಡಿ ರೈಲು ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ ಎನ್ನಲಾಗಿದೆ.
Court (file pic)
ಕೋರ್ಟ್ (ಸಾಂಕೇತಿಕ ಚಿತ್ರ)online desk
Updated on

ಕಲಬುರಗಿ: ಪೋಕ್ಸೊ (POCSO) ಪ್ರಕರಣವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಲ್ಯವಿವಾಹ ಮಾಡಿಸಿದ ಬಾಲಕಿಯ ಪೋಷಕರು ಹಾಗೂ ಆಕೆಯ ಪತಿಗೂ ಶಿಕ್ಷೆ ವಿಧಿಸಿದೆ.

ಮಂಗಳವಾರ ತೀರ್ಪು ನೀಡಿದ ನ್ಯಾಯಾಧೀಶ ಎಸ್.ಎಲ್. ಚೌಹಾಣ್ ಅವರು, ಅತ್ಯಾಚಾರ ಎಸಗಿದ ನಾಗಪ್ಪ ಚಡಬನೂರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ.

ಇದರ ಜೊತೆಗೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಅಡಿ ಬಾಲಕಿಯ ತಂದೆ-ತಾಯಿ ಮತ್ತು ಆಕೆಯ ಪತಿಗೆ ತಲಾ ಒಂದು ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ.

ವಿಶೇಷ ಸರ್ಕಾರಿ ಅಭಿಯೋಜಕ (ಪೊಕ್ಸೊ) ಶಾಂತವೀರ ತುಪ್ಪದ್ ನೀಡಿದ ಮಾಹಿತಿ ಪ್ರಕಾರ, ಆರೋಪಿ ನಾಗಪ್ಪ ಚಡಬನೂರ ಅಪ್ರಾಪ್ತ ಬಾಲಕಿಯನ್ನು ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಆತನ ಕಾಟದಿಂದ ಮಗಳನ್ನು ರಕ್ಷಿಸುವ ಉದ್ದೇಶದಿಂದ ಪೋಷಕರು ಅಪ್ರಾಪ್ತ ವಯಸ್ಸಿನಲ್ಲೇ ಆಕೆಗೆ ಮತ್ತೊಬ್ಬ ಯುವಕನೊಂದಿಗೆ ವಿವಾಹ ಮಾಡಿಸಿದ್ದರು.

Court (file pic)
ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್‌ ರಾಜೀನಾಮೆ

ಆದರೆ, 2024ರ ಸೆಪ್ಟೆಂಬರ್ 5ರಂದು ನಾಗಪ್ಪ ಚಡಬನೂರ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಹಣ ತಂದುಕೊಂಡು ಬರುತ್ತೇನೆ ಎಂದು ಹೇಳಿ ವಾಡಿ ರೈಲು ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ ಎನ್ನಲಾಗಿದೆ.

ಬಳಿಕ ಬಾಲಕಿ ತನ್ನ ಊರಿಗೆ ಮರಳಿ ಪೋಷಕರಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದಾದ ನಂತರ ಪೋಷಕರು ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಸಂತ್ರಸ್ತ ಬಾಲಕಿಗೆ 5 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ (Legal Services Authority) ನೀಡುವಂತೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com