Medical Seat Scam: ಮೆಡಿಕಲ್ ಸೀಟ್ ಕೊಡಿಸುವುದಾಗಿ 45 ಲಕ್ಷ ರೂ ವಂಚನೆ; ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು ಶಿಕ್ಷೆ..!

ಪ್ರಕರಣದ ಪ್ರಮುಖ ಆರೋಪಿ ಹಾಗೂ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ ವಿಚಾರಣೆಯ ಅವಧಿಯಲ್ಲೇ ಮೃತಪಟ್ಟಿದ್ದರಿಂದ ಅವರ ವಿರುದ್ಧದ ಪ್ರಕರಣ ಅಂತ್ಯಗೊಂಡಿತ್ತು.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಭರವಸೆ ನೀಡಿ 45 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ದಿವಂಗತ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಹಾಗೂ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ ವಿಚಾರಣೆಯ ಅವಧಿಯಲ್ಲೇ ಮೃತಪಟ್ಟಿದ್ದರಿಂದ ಅವರ ವಿರುದ್ಧದ ಪ್ರಕರಣ ಅಂತ್ಯಗೊಂಡಿತ್ತು.

ಉಳಿದ ಆರೋಪಿಯಾಗಿದ್ದ ಪತ್ನಿ ನಾಗವೇಣಿ ವಿರುದ್ಧದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಏನಿದು ಪ್ರಕರಣ..?

ಜೆ. ನರಸಿಂಹಸ್ವಾಮಿ ಮತ್ತು ನಾಗವೇಣಿ ಅವರು ಪ್ರಕಾಶ್ ಕುಮಾರ್ ಎಂಬುವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 45 ಲಕ್ಷ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

File photo
ಮೆಡಿಕಲ್ ಸೀಟ್ ಗಾಗಿ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರ ಬಂಧನ

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂದೀಪ್ ಪಾಟೀಲ್ ಅವರು ನಾಗವೇಣಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ (ಸಂಚು) ಅಡಿ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.10,000 ದಂಡ, ಸೆಕ್ಷನ್ 420 (ವಂಚನೆ) ಅಡಿ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ದಿವಂಗತ ಆರ್.ಎಲ್. ಜಾಲಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಕೇಂದ್ರ ಜವಳಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 2021ರಲ್ಲಿ 96ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com