ಕಲಬುರಗಿಯ ಹಾಸ್ಟೆಲ್ ನಲ್ಲಿ ಕಲುಷಿತ ಆಹಾರ ಸೇವನೆ ಶಂಕೆ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು-Video

ದಂಡೋತಿ ಗ್ರಾಮದ ವಿದ್ಯಾರ್ಥಿನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಊಟ ಮಾಡಿದ ಕೆಲವೇ ಸಮಯದಲ್ಲಿ ಹಲವು ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
Students admitted to hospital
ಕಲಬುರಗಿಯಲ್ಲಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Updated on

ಹುಬ್ಬಳ್ಳಿ: ಕಲಬುರಗಿ ಜಿಲ್ಲೆಯ ವಿದ್ಯಾರ್ಥಿನಿಲಯವೊಂದರಲ್ಲಿ ಆಹಾರ ಸೇವಿಸಿದ ಬಳಿಕ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಂಡೋತಿ ಗ್ರಾಮದ ವಿದ್ಯಾರ್ಥಿನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಊಟ ಮಾಡಿದ ಕೆಲವೇ ಸಮಯದಲ್ಲಿ ಹಲವು ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Students admitted to hospital
6ನೇ ತರಗತಿ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಹೃದಯ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟ ಶಂಕೆ, ವರದಿಗಾಗಿ ಕಾಯುತ್ತಿರುವ ಪೊಲೀಸರು..!

ಎಲ್ಲಾ ವಿದ್ಯಾರ್ಥಿಗಳನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ವಿದ್ಯಾರ್ಥಿನಿಲಯದ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಕಲುಷಿತ ನೀರು ಅಥವಾ ಆಹಾರದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸಾಧ್ಯತೆಯನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದರ ಜೊತೆಗೆ, ವಿದ್ಯಾರ್ಥಿನಿಲಯದಲ್ಲಿ ಬಡಿಸಲಾದ ಆಹಾರದ ಗುಣಮಟ್ಟ ಹಾಗೂ ಅಲ್ಲಿನ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com