

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಆರ್ ಎಸ್ಎಸ್ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ನೋಂದಣಿಗೆ ಪಟ್ಟು ಹಿಡಿದಿದ್ದರೆ, ಬೆಳಗಾವಿಯಲ್ಲಿ ಆರ್ ಎಸ್ಎಸ್ ವಾರ್ಷಿಕ ಸಭೆ ನಡೆಯುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಟೀಕಾ ಪ್ರಹಾರ ನಡೆಸಿದ್ದಾರೆ.
ಆರ್ ಎಸ್ಎಸ್ ನವರು ಬೆಳಗಾವಿಯಲ್ಲಿ ಏಕೆ ಸಭೆ ನಡೆಸುತ್ತಿದ್ದಾರೆ ಅಂತ ಗೊತ್ತಿಲ್ಲ. ಪ್ರತಿ ಬಾರಿ RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಹಿಂದೆ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅಂತಹವರ ಹತ್ಯೆ ಆಗಿತ್ತು. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.
ದೇಣಿಗೆ ಕಳುವು ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿದ ಅವರು, ಟ್ರಸ್ಟ್ ಸ್ಥಾಪನೆ, ಶಿಲಾನ್ಯಾಸ ಮತ್ತು ಪ್ರಾಣ ಪ್ರತಿಷ್ಠಾಪನೆಯ ಜವಾಬ್ದಾರಿಯನ್ನು ಪ್ರಧಾನಿಗಳು ಹೊರಬೇಕು ಎಂದಿದ್ದಾರೆ.
200 ಕೋಟಿ ರೂ ಲೂಟಿ ಮತ್ತು ಅಮೂಲ್ಯ ರಾಮಾಯಣ ಪುಸ್ತಕ ಕಳ್ಳತನವಾಗಿರುವ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.