'ಹಿಂದಿನ ಸೀಟಿಗೆ ಬಾ': ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ; ಕಂಡಕ್ಟರ್ ಇರ್ಫಾನ್ ಬಂಧನ

ಬಂಧಿತ ಕಂಡಕ್ಟರ್ ನನ್ನು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್(32) ಎಂದು ಗುರುತಿಸಲಾಗಿದೆ.
Bus conductor arrested for exposing his private parts to college students in Mangaluru
ಇರ್ಫಾನ್(32)
Updated on

ಮಂಗಳೂರು: ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಮರ್ಮಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಕಂಡಕ್ಟರ್ ನನ್ನು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್(32) ಎಂದು ಗುರುತಿಸಲಾಗಿದೆ.

ಆರೋಪಿ ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

Bus conductor arrested for exposing his private parts to college students in Mangaluru
ರಾಮನಗರ: 4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ, ಸಂಬಂಧಿ ಅರೆಸ್ಟ್

ಜುಲೈ 9 ರ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಬಸ್​ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನ ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂದೆ ತನ್ನ ಮರ್ಮಾಂಗ ಪ್ರದರ್ಶನ ಮಾಡಿದ್ದು, ಅತ್ಯಂತ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ವಿದ್ಯಾರ್ಥಿನಿಯರನ್ನು ಬಸ್​ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಂಡಕ್ಟರ್‌ನ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾಮುಕ ಕಂಡಕ್ಟರ್‌ನನ್ನ ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com