ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
prashant
ಆರೋಪಿ ಪ್ರಶಾಂತ್
Updated on

ಬೆಂಗಳೂರು: ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ‌ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳಮ್ಮ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂಜಮ್ಮ ಪೌರಕಾರ್ಮಿಕರಾಗಿದ್ದರು. ಸತೀಶ್ ಪ್ಲಂಬರ್ ಕೆಲಸ ಮಾಡುತ್ತಿದ್ದರು. ಕೃತ್ಯ ಎಸಗಿದ ಆರೋಪಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬಸ್ಥರೆಲ್ಲರು ಕಳೆದ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪ್ರಶಾಂತ್‌ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗಿರಲಿಲ್ಲ. ಇಂದು ತಂದೆ ಕೆಲಸಕ್ಕೆ ಹೋಗಿದ್ದಾಗ ಪ್ರಶಾಂತ್‌ ಮೂವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

prashant
ಬೆಂಗಳೂರು: ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು, PT ಶಿಕ್ಷಕನ ಮೇಲೆ ಕೊಲೆ ಆರೋಪ!

ಘಟನೆಗೆ ಕಾರಣ ಗೊತ್ತಾಗಿಲ್ಲ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಮನೆ ಮಾಲೀಕರು ಹಾಗೂ ಸ್ಥಳೀಯರು ಆರೋಪಿಯನ್ನು ಹಿಡಿದು ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com